ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣ: ಎಫ್‍ಐಆರ್ ದಾಖಲು
Update: 2024-12-26 11:39 GMT
ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದ ಘಟನೆಯ ಕುರಿತು ನಂದಿನಿ ಲೇಔಟ್ ಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.
ಮುನಿರತ್ನ ನೀಡಿರುವ ದೂರಿನ ಮೇರೆಗೆ ಆರೋಪಿತರ ವಿರುದ್ಧ ಹತ್ಯೆ ಮಾಡುವ ಉದ್ದೇಶ ಹಾಗೂ ಒಳಸಂಚು ರೂಪಿಸಿ ಹಲ್ಲೆ ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿವೊಬ್ಬರು ಹೇಳಿದ್ದಾರೆ.
ಇನ್ನೂ, ಮುನಿರತ್ನ ಅವರು, ತಮ್ಮನ್ನು ಹತ್ಯೆ ಮಾಡುವ ಸಂಚಿನ ಮುಂದುವರೆದ ಭಾಗವಾಗಿ ಮೊಟ್ಟೆ ಎಸೆಯಲಾಗಿದೆ ಎಂದು ಆರೋಪಿಸಿ ದೂರು ನೀಡಿದ್ದರು. ಪ್ರತಿಯಾಗಿ ಮೊಟ್ಟೆ ಎಸೆದವ ಎಂದು ಆರೋಪ ಎದುರಿಸುತ್ತಿರುವವರೂ ಸಹ ಪ್ರತಿದೂರು ನೀಡಿದ್ದಾರೆ. ಮುನಿರತ್ನ ಅವರ ಬೆಂಬಲಿಗರೇ ಗುಂಪು ಕಟ್ಟಿಕೊಂಡು ನಮ್ಮ ಮೇಲೆ ಹಲ್ಲೆ ಮಾಡಿದ್ದಾರೆಂದು ಉಲ್ಲೇಖಿಸಿದ್ದಾರೆ.