‘ಒಳ ಮೀಸಲಾತಿ’ ಸಚಿವ ಕೆ.ಎಚ್.ಮುನಿಯಪ್ಪ ನೇತೃತ್ವದಲ್ಲಿ ಅಧಿಕಾರಿಗಳ ಸಭೆ
Update: 2025-04-16 21:31 IST

ಬೆಂಗಳೂರು: ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸುವ ಹಿನ್ನಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ನೇತೃತ್ವದಲ್ಲಿ ಬುಧವಾರ ವಿಧಾನಸೌಧದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಯಿತು.
ಪರಿಶಿಷ್ಟ ಜಾತಿಯಲ್ಲಿನ 101 ಜಾತಿಗಳಲ್ಲಿ ಸರಕಾರದ ವತಿಯಿಂದ ಜಾತಿ ಸಮೀಕ್ಷೆಯನ್ನು ಯಾವ ರೀತಿ ನಡೆಸಬೇಕು ಮತ್ತು ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕಲ್ಪಿಸಲು ಸರಕಾರ ಯಾವ ಕ್ರಮಕೈಗೊಳ್ಳುತ್ತಿದೆ ಎಂಬ ವಿಷಯಗಳ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಮುನಿಯಪ್ಪ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಎಚ್.ಆಂಜನೇಯ, ಮಾಜಿ ಸಂಸದ ಎನ್.ಚಂದ್ರಪ್ಪ, ಅಭಿವೃದ್ಧಿ ಆಯುಕ್ತೆ ಉಮಾ ಮಹದೇವನ್, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್, ಆಯುಕ್ತ ರಾಕೇಶ್ ಕುಮಾರ್, ನಿವೃತ್ತ ಐಎಎಸ್ ಅಧಿಕಾರಿಗಳಾದ ಗೋನಾಳ ಭೀಮಪ್ಪ, ತೇಗನೂರು, ಭೀಮಾಶಂಕರ್ ಹಾಗೂ ಸಚಿವರ ಆಪ್ತ ಕಾರ್ಯದರ್ಶಿ ಡಾ.ಎಚ್.ನಟರಾಜ್ ಉಪಸ್ಥಿತರಿದ್ದರು.