ಬೆಂಗಳೂರು | ಯುವಕನನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ ಹತ್ಯೆಗೈದ ದುಷ್ಕರ್ಮಿಗಳು
Update: 2025-04-07 23:38 IST
ಬೆಂಗಳೂರು : ಯುವಕನನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ ಕೊಲೆ ಮಾಡಿರುವ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸುಮಾರು 25 ರಿಂದ 30 ವರ್ಷದಂತೆ ಕಾಣುವ ಈ ಯುವಕನ ಹೆಸರು, ವಿಳಾಸ ಸದ್ಯಕ್ಕೆ ತಿಳಿದು ಬಂದಿಲ್ಲ. ಬನಂಶಕರಿ 6ನೆ ಹಂತದ ಸಮೀಪ ಈ ಯುವಕ ರಾತ್ರಿ ನಡೆದು ಹೋಗುತ್ತಿದ್ದಾಗ ದುಷ್ಕರ್ಮಿಗಳು ಅಡ್ಡಹಾಕಿ ಏಕಾಏಕಿ ದಾಳಿ ಮಾಡಿ ತಲೆ, ಕೈ-ಕಾಲು ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಮನಬಂದಂತೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ಹಲ್ಲೆಯಿಂದ ಗಂಭೀರಗಾಯಗೊಂಡು ಈತ ಸ್ಥಳದಲ್ಲಿಯೇ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಮೃತದೇಹವನ್ನು ಆರ್‌ಆರ್ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೆÇಲೀಸರು ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.