ಬಿರ್ಸಾ ಮುಂಡಾರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು: ವಿಜಯೇಂದ್ರ

Update: 2024-11-15 15:57 GMT

ಬಿ.ವೈ.ವಿಜಯೇಂದ್ರ

ಬೆಂಗಳೂರು : ಆದಿವಾಸಿ ಬುಡಕಟ್ಟು ಸಮುದಾಯದ ನಾಯಕ ಬಿರ್ಸಾ ಮುಂಡಾ ಅವರ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು. ಎಲ್ಲ ಸಮಾಜ, ವರ್ಗಗಳ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಾಗಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದಿಲ್ಲಿ ಕರೆ ನೀಡಿದ್ದಾರೆ.

ಶುಕ್ರವಾರ ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಬಿರ್ಸಾ ಮುಂಡಾ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ಬುಡಕಟ್ಟು ಜನಾಂಗಕ್ಕೆ ಸೇರಿದ ದ್ರೌಪದಿ ಮುರ್ಮು ಅವರನ್ನು ದೇಶದ ರಾಷ್ಟ್ರಪತಿಯನ್ನಾಗಿ ಮಾಡಿದ್ದಾರೆ. ಅಲ್ಲದೆ, ಬುಡಕಟ್ಟು ಜನಾಂಗಕ್ಕೆ ಶಕ್ತಿ ಕೊಡುವ ಕೆಲಸ ಮಾಡಿದ್ದಾರೆ ಎಂದು ನುಡಿದರು.

ಬಿರ್ಸಾ ಮುಂಡಾ ರಾಂಚಿಯಲ್ಲಿ ಜನಿಸಿದ್ದು, ಬ್ರಿಟಿಷರ ವಿರುದ್ಧ ಹೋರಾಟ ಮಾಡಿ ಕೀರ್ತಿ ಪಡೆದವರು. ಅವರು ಬದುಕಿದ್ದು ಕೇವಲ 25 ವರ್ಷಗಳು ಮಾತ್ರ. ಬುಡಕಟ್ಟು ಜನಾಂಗದ ನಾಯಕರಾದ ಅವರು ಯುವಕರಾಗಿದ್ದಾಗಲೇ ಬ್ರಿಟಿಷರ ವಿರುದ್ಧ ತೊಡೆ ತಟ್ಟುವ ಕೆಲಸ ಮಾಡಿದ್ದರು. ಅವರ ಜನ್ಮದಿನವನ್ನು ದೇಶಾದ್ಯಂತ ಇವತ್ತು ಆಚರಿಸಲಾಗುತ್ತಿದೆ. ಅದಕ್ಕೆ ಕಾರಣ ಮೋದಿ ಎಂದು ಅವರು ವಿವರಿಸಿದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News