ನಗರ್ತಪೇಟೆ ಘಟನೆ | ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

Update: 2024-03-22 11:51 GMT

ಬೆಂಗಳೂರು : ನಗರ್ತಪೇಟೆ ಯುವಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸಿದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದು ಕೋರಿ ಅವರು ಹೈಕೋರ್ಟ್‌ಗೆ  ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್  ಅವರಿದ್ದ ಪೀಠ, ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಪ್ರಸನ್ನ ಕುಮಾರ್, ವಿಚಾರಣೆ ವೇಳೆ ಒಂದೆಡೆ ಸೇರಿ ಘಟನೆ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ, ಪ್ರತಿಭಟನೆ ವೇಳೆ ಯಾವುದೇ ಕಾನೂನುಬಾಹಿರ ಕೃತ್ಯ ನಡೆದಿಲ್ಲ ಎಂದು ವಾದಿಸಿದರು.

ಈ ವೇಳೆ ಪ್ರತಿಕ್ರಿಯೆ ನೀಡಿದ ನ್ಯಾಯಪೀಠ ಸಂಚಾರಕ್ಕೆ ಅಡ್ಡಿ ಪಡಿಸಿ, ಇಡೀ ಊರಲ್ಲಿ ಪ್ರತಿಭಟನೆ ನಡೆಸಿದರೆ ಜನ ಓಡಾಡಲು ಸಾಧ್ಯವೇ? ಎಂದು ಹೈಕೋರ್ಟ್ ಪ್ರಶ್ನೆ ಮಾಡಿದೆ. ಅಲ್ಲದೆ, ಸಿದ್ದರಾಮಯ್ಯ ಅವರ ಪ್ರತಿಭಟನೆ‌ ಸಂಬಂಧ‌ದ ಪ್ರಕರಣಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಸುಪ್ರೀಂ ಕೋರ್ಟ್ ನೀಡಿದ ತೀರ್ಪು ತೇಜಸ್ವಿ ಸೂರ್ಯ ಕೇಸಿಗೂ ಅನ್ವಯವಾಗಬಹುದು ಎಂದು ಅಭಿಪ್ರಾಯ ಪಟ್ಟು, ಸಂಸದನ ವಿರುದ್ಧದ ಕೇಸಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News