ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ನಜ್ಮಾ ನಝೀರ್
Update: 2024-03-29 14:44 GMT
ಬೆಂಗಳೂರು: ಜೆಡಿಎಸ್, ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವುದರಿಂದ ಜೆಡಿಎಸ್ ರಾಜ್ಯ ಮಹಿಳಾ ಘಟಕದ ಕಾರ್ಯಾಧ್ಯಕ್ಷೆಯಾಗಿದ್ದ ನಜ್ಮಾ ನಝೀರ್ ಚಿಕ್ಕನೇರಳೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಜೆಡಿಎಸ್ ಪ್ರಚಾರಕಿಯಾಗಿದ್ದ ನಜ್ಮಾ ನಝೀರ್ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿಯ ಘೋಷಣೆಯಾಗುತ್ತಿದ್ದಂತೆಯೇ ಅಸಮಾಧಾನದಿಂದ ಮೌನವಾಗಿದ್ದರು. ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಸಚಿವ ನಬೀ ಸಾಬ್, ಎನ್.ಎಂ. ನೂರ್ ಅಹ್ಮದ್ , ಸೈಯದ್ ಮುಜಿಬ್, ಫಯಾಜ್ ಅಹ್ಮದ್ ಶೇಖ್ ಮತ್ತಿತರರು ಉಪಸ್ಥಿತರಿದ್ದರು.