ಚುನಾವಣಾ ಬಾಂಡ್ ಹೆಸರಿನಲ್ಲಿ ಸಾವಿರಾರು ಕೋ.ರೂ. ಸುಲಿಗೆ ಆರೋಪ: ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ನಳಿನ್ ಕುಮಾರ್ ಕಟೀಲು

Update: 2024-09-30 10:53 GMT

ಬೆಂಗಳೂರು: ಚುನಾವಣಾ ಬಾಂಡ್ ಗಳ ಹೆಸರಿನಲ್ಲಿ ಸಾವಿರಾರು ಕೋಟಿ ರೂ. ಸುಲಿಗೆ ಮಾಡಿದ್ದರೆನ್ನಲಾದ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾಗಿರುವ ಮಾಜಿ ಸಂಸದ ಹಾಗೂ ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷರೂ ಆಗಿರುವ ನಳಿನ್ ಕುಮಾರ್ ಕಟೀಲು ತನ್ನ ಮೇಲಿನ ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ನಳಿನ್ ಕುಮಾರ್ ಸೋಮವಾರ ಬೆಳಗ್ಗೆ ಹೈಕೋರ್ಟ್ ನಲ್ಲಿ ಅರ್ಜಿ ದಾಖಲು ಮಾಡಿದ್ದು, ಅದು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

ಚುನಾವಣಾ ಬಾಂಡ್ ಮೂಲಕ ಕಾರ್ಪೊರೇಟರ್ ಕಂಪೆನಿಗಳಿಂದ ಸಾವಿರಾರು ಕೋಟಿ ರೂ. ಸುಲಿಗೆ ಮಾಡಿರುವ ಆರೋಪದಡಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಜ್ಯಾಧ್ಯ್ಷಕ ಬಿ.ವೈ.ವಿಜಯೇಂದ್ರ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸೇರಿದಂತೆ ಹಲವರ ವಿರುದ್ಧ ಜನಾಧಿಕಾರ ಸಂಘರ್ಷ ಪರಿಷತ್ ಸಹ ಅಧ್ಯಕ್ಷ ಆದರ್ಶ್ ಆರ್. ಐಯ್ಯರ್ ಸಲ್ಲಿಸಿದ್ದ ದೂರಿಗೆ ಸಂಬಂಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಎಫ್ಐಆರ್ ದಾಖಲಿಸುವಂತೆ ತಿಲಕ್ ನಗರ ಠಾಣೆ ಪೊಲೀಸರಿಗೆ ನಿರ್ದೇಶಿಸಿದ್ದರು.

ಅದರನ್ವಯ ಪೊಲೀಸರು ನಿರ್ಮಲಾ ಸೀತಾರಾಮನ್, ವಿಜಯೇಂದ್ರ, ನಳಿನ್ ಕುಮಾರ್, ಇಡಿ ಅಧಿಕಾರಿಗಳು ಸೇರಿದಂತೆ ಬಿಜೆಪಿಯ ರಾಷ್ಟ್ರೀಯ ಮತ್ತು ರಾಜ್ಯ ಘಟಕದ ಹಲವು ಪದಾಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News