ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರಿನಲ್ಲಿ ಎನ್‍ಡಿಎ ಶಕ್ತಿ ಪ್ರದರ್ಶನ

Update: 2024-10-25 13:27 GMT

ಬೆಂಗಳೂರು : ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಎನ್‍ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ, ಶಿಗ್ಗಾಂವಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಭರತ್ ಬೊಮ್ಮಾಯಿ, ಸಂಡೂರಿನಲ್ಲಿ ಬಂಗಾರು ಹನುಮಂತು ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದರು.

ಶಿಗ್ಗಾಂವಿಯಲ್ಲಿ ನಾಮಪತ್ರ ಸಲ್ಲಿಕೆಗೂ ಮುನ್ನ ಮಾಜಿ ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದ ಬಸವರಾಜ ಬೊಮ್ಮಾಯಿ, ಶಾಸಕ ಭೈರತಿ ಬಸವರಾಜ, ಮಾಜಿ ಸಚಿವ ಮುರುಗೇಶ್ ನಿರಾಣಿ ಜೊತೆ ಬೃಹತ್ ರೋಡ್ ಶೋ ಮೂಲಕ ಆಗಮಿಸಿ ಭರತ್ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಮಾಡಿದರು.

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್‍ಗೆ ತಿರುಗೇಟು ನೀಡಲು, ಎನ್‍ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್, ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ, ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರೊಂದಿಗೆ ಬೃಹತ್ ರೋಡ್ ಶೋ ನಡೆಸಿದರು. ಆನಂತರ, ನಿಖಿಲ್ ಕುಮಾರಸ್ವಾಮಿ ತಮ್ಮ ನಾಮಪತ್ರ ಸಲ್ಲಿಕೆ ಮಾಡಿದರು.

ಸಂಡೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ, ಶಾಸಕ ಜನಾರ್ದನ ರೆಡ್ಡಿ, ಮಾಜಿ ಶಾಸಕ ಸೋಮಶೇಖರ್ ರೆಡ್ಡಿ, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು. ಮೆರವಣಿಗೆ ಮೂಲಕ ಸಾಗಿ ಬಂಗಾರು ಹನುಮಂತು ನಾಮಪತ್ರ ಸಲ್ಲಿಸಿದರು.

 

 

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News