ಹೊಸ ವರ್ಷಾಚರಣೆ | ನಶೆ ಮುಕ್ತ ಬೆಂಗಳೂರಿಗಾಗಿ ಪೊಲೀಸರ ಕಾರ್ಯಾಚರಣೆ : ದಯಾನಂದ್

Update: 2024-12-03 17:13 GMT

ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್

ಬೆಂಗಳೂರು : ಹೊಸ ವರ್ಷಾಚರಣೆಯ ವೇಳೆ ಬೆಂಗಳೂರಿನಲ್ಲಿ ಯಾವುದೇ ರೀತಿಯ ಕಾನೂನುಬಾಹಿರ ಚಟುವಟಿಕೆಗಳು, ಮಾದಕ ವಸ್ತುಗಳ ವಹಿವಾಟು ಆಗದಂತೆ ಮುಂಜಾಗ್ರತಾ ಕ್ರಮವಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದಾರೆ.

ಮಂಗಳವಾರ ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈಗಾಗಲೇ ಮಾದಕ ಪದಾರ್ಥ ಸರಬರಾಜು ಪ್ರಕರಣಗಳ ಆರೋಪಿಗಳು, ಅನುಮಾನಾಸ್ಪದ ವ್ಯಕ್ತಿಗಳು ಮತ್ತು ರೌಡಿಶೀಟರ್‌ಗಳನ್ನು ವಿಚಾರಣೆ ನಡೆಸಲಾಗಿದೆ ಎಂದು ತಿಳಿಸಿದರು.

ಅದರಲ್ಲೂ, ಪಬ್, ವೈನ್ ಸ್ಟೋರ್ಸ್, ಬಾರ್, ರೆಸ್ಟೋರೆಂಟ್‍ಗಳು, ಸ್ಥಳೀಯ ಡಾಬಾ, ಹೋಟೆಲ್ ಮತ್ತು ಲಾಡ್ಜ್‍ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಈಗಾಗಲೇ ನಗರದ ಎಲ್ಲ ವಿಭಾಗಗಳ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಪರಿಶೀಲನೆ ನಡೆಸಲಾಗಿದ್ದು, ಎಚ್ಚರಿಕೆ ವಹಿಸಲಾಗಿದೆ ಎಂದು ಅವರು ಹೇಳಿದರು.

ನಗರದಲ್ಲಿನ 460 ಶಾಲಾ, ಕಾಲೇಜುಗಳು ಮತ್ತು 302 ಹಾಸ್ಟೆಲ್‍ಗಳಿಗೆ ಭೇಟಿ ನೀಡಿ 61,398 ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಸಲಹೆ ಸೂಚನೆಗಳನ್ನು ನೀಡಲಾಗಿದೆ. ಸೈಬರ್ ಅಪರಾಧ ಮತ್ತು ಕಾನೂನುಗಳು ಹಾಗೂ ಮಹಿಳಾ ಸುರಕ್ಷತೆ ಬಗ್ಗೆ ಅರಿವು ಮೂಡಿಸುವ ಕ್ರಮ ಕೈಗೊಳ್ಳಲಾಗಿದೆ ಎಂದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News