ಬೆಂಗಳೂರಿನ ಕೊಳವೆಬಾವಿಯಿಂದ ನೀರು ಪೂರೈಸುವ ಟ್ಯಾಂಕರ್ ಗಳು ಸರಕಾರದ ಸುಪರ್ದಿಗೆ: ಡಿಸಿಎಂ ಡಿಕೆಶಿ

Update: 2024-03-02 08:34 GMT

ಬೆಂಗಳೂರು, ಮಾ.2: ಬೆಂಗಳೂರಿನ ನೀರಿನ ಅಭಾವ ನೀಗಿಸಲು ಕೊಳವೆಬಾವಿಯಿಂದ ನೀರು ಪೂರೈಸುವ ಟ್ಯಾಂಕರ್ ಗಳನ್ನು ಸರಕಾರದ ಸುಪರ್ದಿಗೆ ತೆಗೆದುಕೊಳ್ಳಲಾಗುವುದು ಎಂದು ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಸದಾಶಿವ ನಗರದ ಬಳಿ ಇಂದು ಮಾಧ್ಯಮಗಳಿಗೆ ಈ ಬಗ್ಗೆ ಮಾಹಿತಿ ನೀಡಿದ ಶಿವಕುಮಾರ್, ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ದಂಧೆ ತಡೆಯಲು ಕೊಳವೆಬಾವಿ ಹಾಗೂ ಅವುಗಳಿಂದ ನೀರು ಪೂರೈಕೆ ಮಾಡುವ ಟ್ಯಾಂಕರ್ ಗಳು ಮಾ.7ರ ಒಳಗಾಗಿ ನೋಂದಣಿ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದೇವೆ ಎಂದರು.

ಕೊಳವೆ ಬಾವಿಗಳ ಮೂಲಕ ಬೆಂಗಳೂರಿನ ಕುಡಿಯುವ ನೀರಿನ ಅಭಾವ ನೀಗಿಸುತ್ತೇವೆ. ಈ ವಿಚಾರವಾಗಿ ಮಾ.4ರಂದು ಮಧ್ಯಾಹ್ನ 12 ಗಂಟೆಗೆ ಸಭೆ ಕರೆಯಲಾಗಿದೆ. ಇನ್ನು ನನ್ನ ಇಲಾಖೆ ಅನುದಾನದಿಂದ ಬೆಂಗಳೂರಿನ ಎಲ್ಲಾ ಕ್ಷೇತ್ರಗಳ ಕುಡಿಯುವ ನೀರಿನ ಪೂರೈಕೆಗೆ ತಲಾ 10 ಕೋಟಿ ರೂ. ನೀಡಲಾಗಿದೆ. ಎಂದವರು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News