ನಕಲಿ ಎಫ್‍ಎಸ್‍ಎಲ್ ವರದಿ ಬಿಡುಗಡೆ ಮಾಡಿದ ಬಿಜೆಪಿ ವಿರುದ್ಧ ದೂರು

Update: 2024-03-04 16:11 GMT

Photo: X/@annatarajgowda

ಬೆಂಗಳೂರು: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಲಾಗಿದೆ ಎಂದು ಹೇಳಲಾದ ಪ್ರಕರಣ ಸಂಬಂಧ ನಕಲಿ ಎಫ್‍ಎಸ್‍ಎಲ್ ವರದಿಯನ್ನು ಜಾಲತಾಣದಲ್ಲಿ ಹಂಚಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಬಿಜೆಪಿ ಕರ್ನಾಟಕ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ವಕ್ತಾರ ಎ.ಎನ್.ನಟರಾಜ್‍ಗೌಡ ಪಶ್ಚಿಮ ವಿಭಾಗದ ಸೆನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಖಾಸಗಿ ಸಂಸ್ಥೆಯ ಎಫ್‍ಎಸ್‍ಎಲ್ ವರದಿಯು ನಕಲಿಯಾಗಿದ್ದು, ಅದನ್ನು ಬಹಿರಂಗವಾಗಿ ಹಂಚಿಕೊಳ್ಳುವ ಮೂಲಕ ಪೊಲೀಸರ ತನಿಖೆಯ ಮೇಲೆ ಸಾರ್ವಜನಿಕರಿಗೆ ಅಪನಂಬಿಕೆಯನ್ನು ಮೂಡಿಸುವ ಮತ್ತು ದಿಕ್ಕು ತಪ್ಪಿಸಿ ಗೊಂದಲದ ವಾತಾವರಣ ನಿರ್ಮಾಣ ಮಾಡುವ ದುರುದ್ದೇಶವನ್ನು ಬಿಜೆಪಿಯ ರಾಜ್ಯಾಧ್ಯಕ್ಷ ಹಾಗೂ ಪಕ್ಷದ ಸಾಮಾಜಿಕ ಜಾಲತಾಣ ವಿಭಾಗ ಹೊಂದಿದೆ. ಆದುದರಿಂದ ಈ ಕೂಡಲೇ ಇವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News