ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ರಘುವೀರ್ ಎಸ್. ಗೌಡ ನೇಮಕ
Update: 2024-04-02 17:05 GMT
ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ, 2023ರ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷರಾಗಿದ್ದ ರಘುವೀರ್ ಎಸ್. ಗೌಡ ಅವರನ್ನು ಕೆಪಿಸಿಸಿ ನೂತನ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.
ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸೂಚನೆ ಹಿನ್ನೆಲೆಯಲ್ಲಿ ರಘುವೀರ್ ಎಸ್. ಗೌಡ ಅವರಿಗೆ ಮೇಲ್ಕಂಡ ಸ್ಥಾನಮಾನ ನೀಡಲಾಗಿದೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.