ಅಮಿತ್ ಶಾ ವಿರುದ್ಧ ವೆಲ್ಫೇರ್ ಪಾರ್ಟಿಯಿಂದ ಚುನಾವಣಾ ಆಯೋಗಕ್ಕೆ ದೂರು

Update: 2024-05-04 17:45 GMT

ಬೆಂಗಳೂರು: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ವಿರುದ್ಧ ಚುನಾವಣಾ ಪ್ರಚಾರ ಸಭೆಯೊಂದರಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ ದೂರು ನೀಡಲಾಗಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ತಾಹೇರ್ ಹುಸೇನ್ ಹೇಳಿದ್ದಾರೆ.

ಶನಿವಾರ ನಗರದ ಶೇಷಾದ್ರಿ ರಸ್ತೆಯಲ್ಲಿರುವ ನಿರ್ವಾಚನ ಸದನದಲ್ಲಿ ಚುನಾವಣಾಧಿಕಾರಿಯನ್ನು ಭೇಟಿ ಮಾಡಿ ದೂರು ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೆಲ್ಫೇರ್ ಪಾರ್ಟಿಯು ದೇಶದಲ್ಲಿ ಇಸ್ಲಾಮಿಕ್ ಸ್ಟೇಟ್ ಮಾಡಲು ಪ್ರಯತ್ನಿಸುತ್ತಿದೆ ಎಂದು ಅಮಿತ್ ಶಾ ಸುಳ್ಳಾರೋಪ ಹೊರಿಸಿದ್ದರು. ಇದು ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದಿದೆ ಎಂದರು.

ವೆಲ್ಫೇರ್ ಪಾರ್ಟಿ ಚುನಾವಣಾ ಆಯೋಗದಲ್ಲಿ ಅಧಿಕೃತವಾಗಿ ನೋಂದಾಯಿತ ಪಕ್ಷವಾಗಿದ್ದು, ಕಳೆದ 13 ವರ್ಷಗಳಿಂದ ಸಂವಿಧಾನಿಕವಾಗಿ ಸೇವೆ ಸಲ್ಲಿಸುತ್ತಿದೆ. ಕಳೆದ ಹತ್ತು ವರ್ಷಗಳ ಕಾಲ ಆಡಳಿತ ನಡೆಸಿ ಯಾವುದೇ ಸಾಧನೆ ಮಾಡದೆ ಸೋಲಿನ ಸುಳಿವು ಸಿಕ್ಕಿದಾಗ ಹತಾಶರಾದ ಅಮಿತ್ ಶಾ ಇಂತಹ ಅಸಂಬದ್ಧ ಹೇಳಿಕೆ ನೀಡುತ್ತಿದ್ದಾರೆ. ಜನರು ಇಂತಹವರಿಗೆ ಚುನಾವಣೆಯಲ್ಲಿ ಉತ್ತರ ನೀಡಬೇಕೆಂದು ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಉಪಾಧ್ಯಕ್ಷ ಹಬೀಬುಲ್ಲಾಹ್ ಖಾನ್, ಪ್ರಧಾನ ಕಾರ್ಯದರ್ಶಿ ರಿಯಾಝ್, ಮುಖಂಡ ಪ್ರಭಾಕರ್ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News