ಅಶ್ಲೀಲ ವಿಡಿಯೋ, ಫೊಟೊ ಇಟ್ಟುಕೊಂಡರೆ ಕಾನೂನು ಕ್ರಮ : ಎಸ್‍ಐಟಿ ಎಚ್ಚರಿಕೆ

Update: 2024-05-06 17:17 GMT

ಬೆಂಗಳೂರು : ಅಶ್ಲೀಲ ವಿಡಿಯೋ, ಫೋಟೊ ಹಾಗೂ ಧ್ವನಿ ಮುದ್ರಣವನ್ನು ಇಟ್ಟುಕೊಳ್ಳುವುದು ಸಹ ಅಪರಾಧ. ಕಂಪ್ಯೂಟರ್, ಲ್ಯಾಪ್‍ಟಾಪ್, ಮೊಬೈಲ್ ಹಾಗೂ ಇತರೆ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಸಂಗ್ರಹಿಸಿಟ್ಟುಕೊಂಡಿದ್ದು ಪತ್ತೆಯಾದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಸ್‍ಐಟಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಸೋಮವಾರ ಪತ್ರಿಕಾ ಪ್ರಕಟನೆ ನೀಡಿರುವ ಎಸ್‍ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್, ಅಶ್ಲೀಲ ವಿಡಿಯೋ, ಫೋಟೊ ಹಾಗೂ ಧ್ವನಿವರ್ಧಕ ಹಂಚಿಕೊಳ್ಳುವುದಷ್ಟೇ ಅಲ್ಲದೇ ಇಟ್ಟುಕೊಳ್ಳುವುದು ಸಹ ಅಪರಾಧ. ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಕ್ರಮ ಜರುಗಿಸಲು ಅವಕಾಶವಿದೆ ಎಂದಿದ್ದಾರೆ.

ಅಶ್ಲೀಲ ವಿಡಿಯೋ ಹಾಗೂ ಫೋಟೊಗಳನ್ನು ಇಟ್ಟುಕೊಳ್ಳುವವರನ್ನು ಪತ್ತೆ ಮಾಡುವುದು ಸುಲಭ. ಯಾರಾದರೂ ಅಂತಹ ವಿಡಿಯೋ ಹಾಗೂ ಫೋಟೊಗಳನ್ನು ಇಟ್ಟುಕೊಂಡಿದ್ದರೆ ಅಳಿಸಿ (ಡಿಲೀಟ್) ಹಾಕುವುದರಿಂದ ಕಾನೂನು ಕ್ರಮಗಳಿಂದ ಪಾರಾಗುವ ಸಾಧ್ಯತೆ ಇರುತ್ತದೆ ಎಂದು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News