ನಗರದಲ್ಲಿ ಬೈಕ್ ಟ್ಯಾಕ್ಸಿ ವಿರುದ್ಧ ಕ್ರಮ : ಸಾರಿಗೆ ಇಲಾಖೆ ಆದೇಶ

Update: 2024-07-04 16:50 GMT

ಸಾಂದರ್ಭಿಕ ಚಿತ್ರ Photo : ANI 

ಬೆಂಗಳೂರು : ನಗರದ 11 ಆರ್.ಟಿ.ಒ ಕಚೇರಿಗಳ ವ್ಯಾಪ್ತಿಯಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳು ಒಳಗೊಂಡಂತೆ ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

ಬೈಕ್ ಟ್ಯಾಕ್ಸಿ ವಿರುದ್ಧ ಕಠಿಣ ಮತ್ತು ನಿರ್ದಾಕ್ಷಣ್ಯ ಕ್ರಮ ಕೈಗೊಳ್ಳಬೇಕು ಎಂಬುದು ಖಾಸಗಿ ಸಾರಿಗೆ ಚಾಲಕ ಸಂಘಟನೆಗಳ ಬೇಡಿಕೆಗಳಲ್ಲಿ ಒಂದಾದ್ದು, ಚಾಲಕರು ಪ್ರತಿಭಟನೆಯನ್ನು ನಡೆಸಿದ್ದರು. ಪ್ರತಿಭಟನೆಗೆ ಮಣಿದಿರುವ ಸಾರಿಗೆ ಇಲಾಖೆ ಇಂದಿನಿಂದ(ಜು.5) ಕಾನೂನು ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ.

ಕಳೆದ 2021 ರಲ್ಲಿಯೇ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆಯನ್ನು ಸರಕಾರ ವಾಪಸ್ ಪಡೆದಿದೆ. ಆದರೆ ನಗರದಲ್ಲಿ ಅನಧಿಕೃತವಾಗಿ ಬೈಕ್ ಟ್ಯಾಕ್ಸಿಗಳು ಸಂಚರಿಸುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇಂತಹ ಕಾನೂನು ಬಾಹಿರ ಸಂಚಾರಿ ವ್ಯವಸ್ಥೆಗೆ ಕಡಿವಾಣ ಹಾಕಬೇಕು ಎಂದು ಪ್ರತಿಭಟನಾಕಾರರು ಮಾಡಿದ ಮನವಿಗೆ ಸ್ಪಂದಿಸಿ ಸಾರಿಗೆ ಇಲಾಖೆ ಕ್ರಮ ಕೈಗೊಂಡಿದೆ. ತಕ್ಷಣವೇ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳು ಮತ್ತು ಗೃಹ ರಕ್ಷಕ ಸಿಬ್ಬಂದಿಯೊಂದಿಗೆ ಕಾರ್ಯಾಚರಣೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ.

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News