ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ

Update: 2024-07-05 16:14 GMT

ಬೆಂಗಳೂರು : ರಾಜ್ಯ ಸರಕಾರವು ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಸೇರಿದಂತೆ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ.

ರಾಜ್ಯ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಶರತ್ ಬಿ.ಅವರನ್ನು ರಾಜ್ಯ ನಗರ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿಶೇಷ ಆಯುಕ್ತ(ಚುನಾವಣೆ) ಡಾ.ಸೆಲ್ವಮಣಿ ಅವರನ್ನು ರಾಜ್ಯ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಗಂಗೂಬಾಯಿ ರಮೇಶ್ ಮಣಾಕರ್ ಅವರನ್ನು ರಾಜ್ಯ ಪತ್ರಾಗಾರ ಇಲಾಖೆಯ ಮುಖ್ಯ ಸಂಪಾದಕರನ್ನಾಗಿ ಹಾಗೂ ಮೈಸೂರಿನ ಅಬ್ದುಲ್ ನಝೀರ್ ಸಾಬ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ನಿರ್ದೇಶಕಿ ಲಕ್ಷ್ಮೀಪ್ರಿಯಾ ಕೆ. ಅವರನ್ನು ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ತಕ್ಷಣದಿಂದಲೆ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News