ಆರ್ಯ ವೈಶ್ಯ ನಿಗಮದ ಕ್ರಿಯಾ ಯೋಜನೆಗೆ ಅನುಮೋದನೆ

Update: 2024-07-05 16:49 GMT

ಬೆಂಗಳೂರು : ಆರ್ಯ ವೈಶ್ಯ ನಿಗಮದ ಮೂಲಕ 2023-24ರ ಸಾಲಿನಲ್ಲಿ 800 ಫಲಾನುಭವಿಗಳಿಗೆ ವಿವಿಧ ಯೋಜನೆಗಳ ಅಡಿಯಲ್ಲಿ ಸಣ್ಣ ಉದ್ಯಮಿಗಳಿಗೆ ಸಾಲ-ಸಹಾಯಧನ ನೀಡಲಾಗಿತ್ತು. ಈ ವರ್ಷವೂ ಸಹ ಈ ಎಲ್ಲ ಯೋಜನೆಗಳೂ ಮುಂದುವರಿಸಲು 2024-25ನೆ ಸಾಲಿನ ವಾರ್ಷಿಕ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ.

ಕ್ರಿಯಾ ಯೋಜನೆ ರೂಪಿಸುವ ಕುರಿತು ನಗರದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಆರ್ಯ ವೈಶ್ಯ ನಿಗಮದ ಸಹಾಯ ಅಗತ್ಯವಿರುವ ಅರ್ಹ ಸಣ್ಣ ಉದ್ಯಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಸಲ್ಲಿಸಿ ಸದುಪಯೋಗ ಪಡೆದುಕೊಳ್ಳಬೇಕು ತಿಳಿಸಿದರು.

ನಿಗಮದ ವ್ಯವಸ್ಥಾಪಕ ನಿರ್ದೇಶಕಿ ದೀಪಶ್ರೀ.ಕೆ ಮಾತನಾಡಿ, ಮರುಪಾವತಿಯನ್ನು ಆನ್‍ಲೈನ್ ಮೂಲಕ ಪಡೆಯುತ್ತಿದ್ದು, ಮರುಪಾವತಿಗಾಗಿ ಇನ್ನೂ ಹೆಚ್ಚಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಆರ್ಥಿಕ ಇಲಾಖೆಯ ಜಂಟಿ ಕಾರ್ಯದರ್ಶಿ ಎಚ್.ಎ.ಶೋಭ, ಕಂದಾಯ ಇಲಾಖೆಯ ಉಪಕಾರ್ಯದರ್ಶಿ ಎಸ್.ಎನ್.ಕಲಾವತಿ ಮತ್ತಿತರರು ಹಾಜರಿದ್ದರು.

ಜು.12ರಿಂದ ಅರ್ಜಿ ಸಲ್ಲಿಸಿ: ಕರ್ನಾಟಕ ಆರ್ಯ ವೈಶ್ಯ ಅಭಿವೃದ್ಧಿ ನಿಗಮದ ವತಿಯಿಂದ 3ಯೋಜನೆಗಳಾದ ಸ್ವಯಂ-ಉದ್ಯೋಗ ನೇರಸಾಲ ಯೋಜನೆ, ಬ್ಯಾಂಕ್‍ಗಳ ಸಹಯೋಗದೊಂದಿಗೆ ಆರ್ಯ ವೈಶ್ಯ ಆಹಾರ ವಾಹಿನಿ ಯೋಜನೆ ಮತ್ತು ವಾಸವಿ ಜಲಶಕ್ತಿ ಯೋಜನೆಗಳಿಗೆ ಜು.12ರಿಂದ ಆನ್‍ಲೈನ್ ಮೂಲಕ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆ.31 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ನಿಗಮದ ಸಹಾಯವಾಣಿ-94484 51111ಕ್ಕೆ ಸಂಪರ್ಕಿಸಬಹುದು.

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News