ಉಪಚುನಾವಣೆ : ಬಿಜೆಪಿ ಉಸ್ತುವಾರಿಗಳ ನೇಮಕ

Update: 2024-07-07 16:00 GMT

ಬೆಂಗಳೂರು: ವಿಧಾನಸಭೆ ಮತ್ತು ವಿಧಾನಪರಿಷತ್ ಉಪ ಚುನಾವಣೆಗಳಿಗೆ ಕ್ಷೇತ್ರವಾರು ಉಸ್ತುವಾರಿಗಳನ್ನು ಬಿಜೆಪಿ ಪಕ್ಷದ ರಾಜ್ಯ ಘಟಕದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇಮಕ ಮಾಡಿದ್ದಾರೆ.

ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ಪಕ್ಷದ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಶಾಸಕರಾದ ಅರವಿಂದ್ ಬೆಲ್ಲದ್, ಮಹೇಶ್ ಟೆಂಗಿನಕಾಯಿ. ಸಂಡೂರಿಗೆ ಸಂಸದ ಗೋವಿಂದ ಕಾರಜೋಳ, ಶಾಸಕ ವಿ.ಸುನೀಲ್‍ಕುಮಾರ್, ವಿಧಾನ ಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಕೆ.ಎಸ್.ನವೀನ್, ಚನ್ನಪಟ್ಟಣಕ್ಕೆ ಶಾಸಕರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಎಂ. ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯ ಎಚ್.ಎಸ್. ಗೋಪಿನಾಥ ರೆಡ್ಡಿ, ಪಕ್ಷದ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಅವರನ್ನು ನೇಮಿಸಲಾಗಿದೆ.

ಅದೇ ರೀತಿ, ಕೋಟ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್ ಸ್ಥಾನಕ್ಕೆ (ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ) ನಡೆಯುವ ಉಪ ಚುನಾವಣೆಗೆ ಸಂಸದರಾದ ಬಸವರಾಜ ಬೊಮ್ಮಾಯಿ, ಕೋಟ ಶ್ರೀನಿವಾಸ ಪೂಜಾರಿ, ಬೃಜೇಶ್ ಚೌಟ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಅವರು ಉಸ್ತುವಾರಿಗಳಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News