ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಬೆಂಕಿ ಅವಘಡ : ಸಿಬ್ಬಂದಿಗಳಿಗೆ ಗಾಯ, ರೋಗಿಗಳ ಸ್ಥಳಾಂತರ

Update: 2024-09-19 18:01 GMT

ಬೆಂಗಳೂರು : ರಾಜಧಾನಿ ಬೆಂಗಳೂರಿನ ಆರ್‌ಎಂವಿ ಲೇಔಟ್ ಬಳಿಯಿರುವ ಪ್ರತಿಷ್ಠಿತ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿ ಏಳೆಂಟು ಸಿಬ್ಬಂದಿಗಳಿಗೆ ಗಾಯಗಳಾಗಿದ್ದು, ರೋಗಿಗಳನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರ ಮಾಡಲಾಗಿದೆ.

ಎಂ.ಎಸ್.ರಾಮಯ್ಯ ಆಸ್ಪತ್ರೆಯ ಎರಡನೇ ಅಂತಸ್ಥಿನಲ್ಲಿರುವ ಕಾರ್ಡಿಯಕ್ ಎಸಿ ವಾರ್ಡ್‍ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ ಆಗಿ ಬಳಿಕ ಇತರೆ ವಾರ್ಡ್‍ಗಳಿಗೆ ಬೆಂಕಿ ಹರಡಿದೆ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಆಸ್ಪತ್ರೆಯ ಸುಮಾರು 8 ನರ್ಸ್‍ಗಳಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು, ಬೆಂಕಿ ಕಾಣಿಸಿಕೊಂಡ ಕೂಡಲೇ ರೋಗಿಗಳನ್ನು ಬೇರೆಗೆ ಸ್ಥಳಾಂತರ ಮಾಡಲಾಗಿದೆ. ಇನ್ನು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಿಂದಿಸುವಲ್ಲಿ ಯಶಸ್ವಿಯಾದ ಪರಿಣಾಮ ಯಾವುದೇ ರೋಗಿಗಳಿಗೆ ಸಮಸ್ಯೆಯಾಗಿಲ್ಲ ಎಂದು ಆಸ್ಪತ್ರೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News