ವಾಲ್ಮೀಕಿ ಜಯಂತಿ ಅರ್ಥಪೂರ್ಣವಾಗಿ ಆಚರಣೆ : ಸಿಎಂ ಸಿದ್ದರಾಮಯ್ಯ

Update: 2024-10-01 16:07 GMT

ಬೆಂಗಳೂರು : ರಾಜ್ಯ ಸರಕಾರದ ವತಿಯಿಂದ ಈ ಬಾರಿ ಅರ್ಥಪೂರ್ಣವಾಗಿ ವಾಲ್ಮೀಕಿ ಜಯಂತಿ ಆಚರಣೆ ನಡೆಸೋಣ. ಸಮುದಾಯದ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಮಂಗಳವಾರ ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ‘2024ನೇ ಸಾಲಿನ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕುರಿತ ಪೂರ್ವಭಾವಿ’ ಸಭೆಯಲ್ಲಿ ಅವರು ಮಾತನಾಡಿದರು.

ಎಸ್‍ಸಿಪಿ/ಟಿಎಸ್‍ಪಿ ಕಾಯ್ದೆ ಮೊದಲಿಗೆ ಜಾರಿ ಮಾಡಿದ್ದು ನಮ್ಮ ಕಾಂಗ್ರೆಸ್ ಸರಕಾರ. ಗುತ್ತಿಗೆಯಲ್ಲಿ ಎಸ್.ಸಿ ಹಾಗೂ ಎಸ್.ಟಿ ಗೆ ಮೀಸಲಾತಿ ಮೊದಲಿಗೆ ತಂದಿದ್ದು ಇಡೀ ದೇಶದಲ್ಲಿ ನಾವು ಮಾತ್ರ. ಭಡ್ತಿಯಲ್ಲೂ ಮೀಸಲಾತಿ ತಂದಿದ್ದು ನಾವು ಮಾತ್ರ ಎಂದು ಕಾಂಗ್ರೆಸ್ ಸರಕಾರದ ಹಲವು ಪ್ರಥಮಗಳನ್ನು ಸಿದ್ದರಾಮಯ್ಯ ವಿವರಿಸಿದರು.

2013-18ರ ವರೆಗೆ ನಾವು ಎಸ್‌ಸಿಪಿ/ಟಿಎಸ್‍ಪಿ ಅನುದಾನವನ್ನು ನಿರಂತರವಾಗಿ ನಾವು ಹೆಚ್ಚಿಸಿದೆವು. ನಂತರ ಬಂದ ಸರಕಾರ ಅನುದಾನವನ್ನು ಕೊಡಲೇ ಇಲ್ಲ. ನಾವು ಮತ್ತೆ ಅಧಿಕಾರಕ್ಕೆ ಬಂದು ಅನುದಾನ ಹೆಚ್ಚಿಸಿದೆವು. ಇದು ನಮ್ಮ ಸರಕಾರದ ಬದ್ದತೆ ಎಂದು ಮುಖ್ಯಮಂತ್ರಿ ಹೇಳಿದರು.

ಸಭೆಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಸಹಕಾರ ಸಚಿವ ಕೆ.ಎನ್.ರಾಜಣ್ಣ, ಶಾಸಕರಾದ ರಘುಮೂರ್ತಿ, ಡಾ.ಶ್ರೀನಿವಾಸ್, ಬಸವನಗೌಡ ದದ್ದಲ್, ಬಿ.ಎಂ.ನಾಗರಾಜು ಹಾಗೂ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News