ಏಕೀಕರಣದಿಂದ ಮೂಲಕ ರಾಜ್ಯೋತ್ಸವದ ಅರ್ಥಪೂರ್ಣ ಆಚರಣೆ: ಡಾ.ಸಿ.ಎನ್. ಅಶ್ವತ್ಥನಾರಾಯಣ್
Update: 2024-11-01 06:23 GMT
ಬೆಂಗಳೂರು: ನಮ್ಮ ಸಂಸ್ಕೃತಿ, ಭಾಷೆ, ನಮ್ಮತನಕ್ಕೆ ಶಕ್ತಿ ತುಂಬುವ ದಿನವಿದು ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಹೇಳಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ 'ಜಗನ್ನಾಥ ಭವನ'ದಲ್ಲಿ ಇಂದು 'ಕನ್ನಡ ರಾಜ್ಯೋತ್ಸವ'ದ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡುತ್ತಿದ್ದರು.
ರಾಜ್ಯದ ಹಲವಾರು ಪ್ರದೇಶಗಳು ವಿವಿಧ ರಾಜ್ಯಗಳಲ್ಲಿ ಹಂಚಿ ಹೋಗಿದ್ದವು. ನಾಡಿನ ಏಕೀಕರಣವಾಗಿ ನಮ್ಮ ರಾಜ್ಯ ವಿಶಾಲ ಕರ್ನಾಟಕವಾಗಿ ಬೆಳೆದು ನಿಂತಿದೆ. ಏಕೀಕರಣದ ಮೂಲಕ ರಾಜ್ಯೋತ್ಸವದ ಅರ್ಥಪೂರ್ಣ ಆಚರಣೆ ಸಾಧ್ಯವಾಗಿದೆ ಎಂದು ವಿಶ್ಲೇಷಿಸಿದರು.
ಈ ಸಂದರ್ಭದಲ್ಲಿ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್, ರಾಜ್ಯ ವಕ್ತಾರ ಪ್ರಕಾಶ್ ಶೇಷಾಚಾರ್ಯ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಹರೀಶ್, ಕೇಂದ್ರ ಜಿಲ್ಲಾ ಅಧ್ಯಕ್ಷ ಸಪ್ತಗಿರಿ ಗೌಡ, ಮಹಾನಗರಪಾಲಿಕೆ ಮಾಜಿ ಸದಸ್ಯ ಮಂಜುನಾಥ್ ಮತ್ತು ಪ್ರಮುಖರು ಉಪಸ್ಥಿತರಿದ್ದರು.