ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ: ಹನುಮೇಗೌಡ
Update: 2025-01-09 16:54 GMT
ಬೆಂಗಳೂರು : ಪೋಲಿಸ್ ಅಧಿಕಾರಿಯನ್ನು ತಳ್ಳುತ್ತಾ, ಅಶ್ಲೀಲ ಶಬ್ದಗಳನ್ನು ಬಳಸಿ ನಿಂದನೆ ಮಾಡಿ, ಬೆದರಿಕೆ ಹಾಕಿ ದುಂಡಾವರ್ತನೆ ಮಾಡಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಕಾರ್ಯಕರ್ತ ಎನ್.ಹನುಮೇಗೌಡ ಒತ್ತಾಯಿಸಿದ್ದಾರೆ.
ಪೋಲಿಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿರುವ ಅವರು, ಸಾರ್ವಜನಿಕ ಬಸ್ ದರ ಹೆಚ್ಚಳವನ್ನು ಖಂಡಿಸಿ, ಜ.3ರಂದು ಬಿಜೆಪಿ ಪಕ್ಷದ ನಾಯಕರು ಪ್ರತಿಭಟನೆ ನಡೆಸುವ ವೇಳೆ ಆರ್. ಅಶೋಕ್ ಪೋಲಿಸ್ ಅಧಿಕಾರಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಆದುದರಿಂದ ಅವರು ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.