ನಿಗದಿತ ವೇಳಾಪಟ್ಟಿಯಂತೆ ಬೆಂವಿವಿ ಬಿ.ಕಾಂ ಮತ್ತು ಸ್ನಾತಕ ಪದವಿ ಪರೀಕ್ಷೆ
Update: 2025-01-12 16:49 GMT
ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯ ಬಿ.ಕಾಂ ಮತ್ತು ಸ್ನಾತಕ ಪದವಿಗಳ ಪರೀಕ್ಷೆಯನ್ನು ಮುಂಡೂಡಬೇಕೆಂದು ಕೋರಿ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದ್ದು, ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆ ನಡೆಸಲು ಮಧ್ಯಂತರ ಆದೇಶ ನೀಡಲಾಗಿದೆ.
ನ್ಯಾಯಾಲಯದ ಆದೇಶದಂತೆ ಬಿ.ಕಾಂ ಮತ್ತು ಸ್ನಾತಕ ಪದವಿಗಳ 1, 3, 5ನೆ ಸೆಮಿಸ್ಟರ್ ಪರೀಕ್ಷೆಗಳು ನಿಗದಿತ ವೇಳಾಪಟ್ಟಿಯಂತೆ ನಡೆಯಲಿದೆ. ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೆ ಒಳಗಾಗದೇ ಪರೀಕ್ಷೆಗಳಿಗೆ ಹಾಜಕರಾಗಬೇಕು. ಮುಂದಿನ ಎಲ್ಲಾ ಪರೀಕ್ಷೆಗಳು ನಿಗದಿತ ವೇಳಾಪಟ್ಟಿಯಂತೆ ನಡೆಯಲಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗದ ಕುಲಸಚಿವ ಶ್ರೀನಿವಾಸ್ ಸಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.