ಸ್ವಾಮಿ ವಿವೇಕಾನಂದರು ಯುವಜನರಿಗೆ ಸ್ಪೂರ್ತಿದಾಯಕ ವ್ಯಕ್ತಿ: ಎಸ್.ಮನೋಹರ್
ಬೆಂಗಳೂರು : ಸ್ವಾಮಿ ವಿವೇಕಾನಂಜ ಅವರು ಯುವ ಪೀಳಿಗೆಗೆ ಅತ್ಯಂತ ಸ್ಪೂರ್ತಿದಾಯಕ ವ್ಯಕ್ತಿಯಾಗಿದ್ದರು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ತಿಳಿಸಿದ್ದಾರೆ.
ರವಿವಾರ ನಗರದ ಅಂಧರ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 162ನೇ ಜನ್ಮದಿನಾಚರಣೆ ಮತ್ತು ಸಂಸದೆ ಪ್ರಿಯಾಂಕಾ ಗಾಂಧಿ ಜನ್ಮದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ರಾಜೀವ್ ಗಾಂಧಿ ಅವರು ರಾಷ್ಟ್ರೀಯ ಯುವ ದಿನಾಚರಣೆಯನ್ನು ಆಚರಿಸುವುದರ ಮೂಲಕ ಯುವ ಪೀಳಿಗೆಗೆ ಸ್ವಾಮಿ ವಿವೇಕಾನಂದರ ಆದರ್ಶ ತತ್ವ ಸಿದ್ಧಾಂತವನ್ನು ಮೈಗೂಡಿಸಿಕೊಂಡು ಉತ್ತಮ ಭಾರತದ ನಿರ್ಮಾಣಕ್ಕೆ ಪಣತೊಡುವ ಸಂದೇಶ ನೀಡಿದರು ಎಂದು ತಿಳಿಸಿದರು.
ಸ್ವಾಮಿ ವಿವೇಕಾನಂದರನ್ನು ಇಡೀ ವಿಶ್ವವೇ ಮೆಚ್ಚುತ್ತದೆ. ಅವರು ಸಣ್ಣ ವಯಸ್ಸಿನಲ್ಲಿ ಅಗಲಿದರೂ ಕೂಡ ಅವರ ದೂರ ದೃಷ್ಟಿಯ ಮಾತುಗಳು ಇಂದಿಗೂ ಎಲ್ಲರ ಮನದಲ್ಲಿ ನೆಲೆಯೂರಿದೆ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಪ್ರಕಾಶ್, ಹೇಮರಾಜ್, ಕೆ.ಟಿ.ನವೀನ್ ಚಂದ್ರ, ಪುಟ್ಟರಾಜು, ರವಿಕುಮಾರ್, ನವೀನ್ ಸಾಯಿ, ವಾಸುದೇವ ಮತ್ತಿತರರು ಉಪಸ್ಥಿತರಿದ್ದರು.