ಬೆಂಗಳೂರು | ಖಾಸಗಿ ವಿಡಿಯೊ ಹರಿಬಿಡುವುದಾಗಿ ಬೆದರಿಕೆ: ಟೆಕ್ಕಿ ಆತ್ಮಹತ್ಯೆ
Update: 2025-01-16 16:15 GMT
ಬೆಂಗಳೂರು : ಖಾಸಗಿ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಲಾಗುತ್ತಿದೆ ಎಂದು ಮಹಿಳಾ ಟೆಕ್ಕಿಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಎಚ್‍ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
ಸುಹಾಸಿ ಸಿಂಗ್ (24) ಆತ್ಮಹತ್ಯೆಗೆ ಶರಣಾದ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದು, ಈಕೆಯ ಮಾವ ಪ್ರವೀಣ್ ಸಿಂಗ್ ಎನ್ನುವವರು ಸುಹಾಸಿ ಅವರಿಗೆ ಖಾಸಗಿ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
ಜ.12 ರಂದು ಕುಂದಲಹಳ್ಳಿಯ ಹೊಟೇಲ್‍ಗೆ ಪ್ರವೀಣ್ ಸಿಂಗ್, ಸುಹಾಸಿ ಅನ್ನು ಕರೆದಿದ್ದು, ಈ ವೇಳೆ ಹೊಟೇಲ್‍ನಲ್ಲಿ ಬೆಂಕಿ ಹಚ್ಚಿಕೊಂಡು ಟೆಕ್ಕಿ ಆತ್ಮಹತ್ಯೆ ಯತ್ನ ಮಾಡಿದ್ದಾಳೆ.ಆನಂತರ, ಬೆಂಕಿಯ ತೀವ್ರತೆಯಿಂದ ಗಂಭೀರವಾಗಿ ಗಾಯಗೊಂಡಿದ್ದು, ಇಲ್ಲಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಿದ್ದರೂ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿವೊಬ್ಬರು ಮಾಹಿತಿ ನೀಡಿದ್ದಾರೆ.
.