ವಿಧಾನಸಭೆಯಲ್ಲಿ ಬಿಬಿಎಂಪಿ ತಿದ್ದುಪಡಿ ವಿಧೇಯಕ ಮಂಡನೆ
Update: 2025-03-18 20:36 IST

ಬೆಂಗಳೂರು : ‘ಯಾವುದೇ ಬೀದಿಯನ್ನು ಸಾರ್ವಜನಿಕ ಬೀದಿಯೆಂದು’ ಘೋಷಿಸುವ ಅಧಿಕಾರವನ್ನು ಪಾಲಿಕೆಗೆ ನೀಡುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು.
ಮಂಗಳವಾರ ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ವಿಧೇಯಕವನ್ನು ಮಂಡಿಸಿದರು.