ಸಿ.ಟಿ.ರವಿ ಅವಹೇಳನಕಾರಿ ಪದ ಬಳಕೆ ಪ್ರಕರಣ: ಪೊಲೀಸ್ ಅಧಿಕಾರಿಗಳು ಸಿಐಡಿ ಮುಂದೆ ಹಾಜರು
Update: 2025-03-19 20:11 IST

ಬೆಂಗಳೂರು : ಚಳಿಗಾಲ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಪದ ಬಳಕೆ ಪ್ರಕರಣದಲ್ಲಿ ವಿಧಾನ ಪರಿಷತ್ತಿನ ಬಿಜೆಪಿ ಸದಸ್ಯ ಸಿಟಿ ರವಿ ಅವರನ್ನು ಬಂಧಿಸಿದ್ದ ಬೆಳಗಾವಿ ಡಿಸಿಪಿ ಮತ್ತು ಎಸಿಪಿ ಅನ್ನು ಸಿಐಡಿ ವಿಚಾರಣೆಗೊಳಪಡಿಸಿದೆ.
ಘಟನೆ ಸಂಬಂಧ ಅಂದು ಸಿಟಿ ರವಿ ವಿರುದ್ಧ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರು ದಾಖಲಿಸಿಕೊಂಡಿದ್ದ ಬೆಳಗಾವಿ ಪೊಲೀಸರು, ಸಿಟಿ ಅವರನ್ನು ಬಂಧಿಸಿದ್ದರು. ಇದಾದ ಬಳಿಕ ಪ್ರಕರಣ ಸಿಐಡಿಗೆ ವರ್ಗಾವಣೆ ಆಗಿತ್ತು. ಇದೀಗ ಸಿಐಡಿ ಅಧಿಕಾರಿಗಳು ಸಿಟಿ ರವಿ ಅವರನ್ನು ಬಂಧನ ಮಾಡಿದ್ದ ಡಿಸಿಪಿ ರೋಹನ ಜಗದೀಶ ಮತ್ತು ಎಸಿಪಿ ಸದಾಶಿವ ಕಟ್ಟಿಮನಿ ಅವರನ್ನು ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡಿದೆ.