ಬೆಂಗಳೂರು ಪ್ರವಾಸಕ್ಕಾಗಿ ಆಗಮಿಸಿದ ಚಿಲಿ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್ ಫಾಂಟ್

Update: 2025-04-04 18:44 IST
ಬೆಂಗಳೂರು ಪ್ರವಾಸಕ್ಕಾಗಿ ಆಗಮಿಸಿದ ಚಿಲಿ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್ ಫಾಂಟ್
  • whatsapp icon

ಬೆಂಗಳೂರು : ಚಿಲಿ ಗಣರಾಜ್ಯದ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ಅವರು ಎರಡು ದಿನಗಳ ಬೆಂಗಳೂರು ಪ್ರವಾಸ ಹಮ್ಮಿಕೊಂಡಿದ್ದು, ಶುಕ್ರವಾರ ಮಧ್ಯಾಹ್ನ 12.30ಕ್ಕೆ ಕೆಂಪೇಗೌಡ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಚಿಲಿ ಅಧ್ಯಕ್ಷರಿಗೆ ಹೂ ಗುಚ್ಚ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಸತ್ಯವತಿ ಜಿ. ಬೆಂಗಳೂರು ನಗರ poಲೀಸ್ ಆಯುಕ್ತ ಬಿ. ದಯಾನಂದ, ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಸೇರಿದಂತೆ ಚಿಲಿ ಗಣರಾಜ್ಯದ ಅಧಿಕಾರಿಗಳು ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News