ಪತ್ರಕರ್ತರ ಕ್ರಿಕೆಟ್ ಕ್ರೀಡಾಕೂಟದ ಲಾಂಛನ ಬಿಡುಗಡೆ

ಬೆಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಸನದಲ್ಲಿ ಎ.12 ಮತ್ತು 13ರಂದು ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕ್ರೀಡಾಕೂಟದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಕಚೇರಿ ಕಾವೇರಿಯಲ್ಲಿ ಸೋಮವಾರ ಅನಾವರಣ ಮಾಡಿದ್ದಾರೆ.
ಈ ಬಾರಿ ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಕಾರದಿಂದ ಕ್ರೀಡಾಕೂಟವನ್ನು ಸಂಘಟಿಸಿದೆ. ಪ್ರತೀ ಜಿಲ್ಲೆಯ ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದು, ಎರಡು ದಿನ ಪತ್ರಕರ್ತರ ಕ್ರಿಕೆಟ್ ಕ್ರೀಡಾ ಹಬ್ಬ ನಡೆಯಲಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದರು.
ಕ್ರಿಕೆಟ್ ಕ್ರೀಡಾಕೂಟ ಲಾಂಛನವು, ಹಾಸನ ಜಿಲ್ಲೆಯ ಜೀವನದಿ ಹೇಮಾವತಿ, ಹೊಯ್ಸಳ ಶಿಲ್ಪ ಕಲೆಯ ತವರೂರು, ಗೊಮ್ಮಟನ ನೆಲೆಬೀಡು ಎನ್ನುವುದನ್ನು ಪ್ರತಿನಿಧಿಸುತ್ತದಲ್ಲದೆ, ಮಲೆನಾಡು, ಅರೆ ಮಲೆನಾಡು, ಬಯಲುಸೀಮೆಯ ಸೊಗಡನ್ನು ಹೊಂದಿದೆ.
ಈ ಸಂದರ್ಭದಲ್ಲಿ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಯರ್, ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಖಜಾಂಚಿ ವಾಸುದೇವ ಹೊಳ್ಳ, ಸಮಿತಿ ಸದಸ್ಯ ಸೋಮಶೇಖರ ಗಾಂಧಿ ಹಾಜರಿದ್ದರು.