ಬೆಂಗಳೂರು | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ
ಬೆಂಗಳೂರು : ಇಲ್ಲಿನ ಹೆಬ್ಬಾಳದಲ್ಲಿರುವ ಕನಕನಗರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಮಂಗಳವಾರ ಪತ್ತೆಯಾಗಿದೆ.
ಬಾಹರ್ ಆಸ್ಮಾ(29) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಆಕೆಯ ಪತಿ ಬಶೀರ್ ವುಲ್ಲಾ ಎಂಬಾತ ಅನೈತಿಕ ಸಂಬಂಧ ಹೊಂದಿದ್ದು, ಆತನೇ ಹತ್ಯೆಗೈದಿದ್ದಾನೆ ಎಂದು ಆಕೆಯ ಪೋಷಕರು ಆರೋಪಿಸಿದ್ದು ಈ ಬಗ್ಗೆ ಪೊಲೀಸರಿಗೆ ದೂರು ನೀಡಿರುವುದಾಗಿ ತಿಳಿದುಬಂದಿದೆ.
ಎರಡು ವರ್ಷಗಳ ಹಿಂದೆ ಆಸ್ಮಾ ಹಾಗೂ ಬಶೀರ್ ವುಲ್ಲಾ ಮದುವೆಯಾಗಿತ್ತು. ಆಸ್ಮಾ ಎಂ.ಎ ಪಧವೀದರರು. ಬಶೀರ್ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸಮಾಡುತ್ತಿದ್ದ, ಮಹಿಳೆಯೊಬ್ಬರ ಜೊತೆ ಅಕ್ರಮ ಸಂಬಂಧ ಹೊಂದಿದ್ದ. ಬಶೀರ್ ವುಲ್ಲಾನ ಮೊಬೈಲ್‍ನಲ್ಲಿ ಆತನ ಅಕ್ರಮ ಸಂಬಂಧಕ್ಕೆ ಸಾಕ್ಷ್ಯಗಳು ಸಿಕ್ಕಿದ್ದವು. ಅದನ್ನು ನೋಡಿದ್ದ ಆಸ್ಮಾ ಪ್ರಶ್ನಿಸಿದಾಗ ಆತ ಹಲ್ಲೆ ಮಾಡಿದ್ದ ಎಂದು ಮೃತ ಮಹಿಳೆಯ ಪೋಷಕರು ಆರೋಪಿಸಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿ ಬಶೀರ್ ವುಲ್ಲಾನನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಹೆಬ್ಬಾಳ ಠಾಣಾ ಪೊಲೀಸರು ತಿಳಿಸಿದ್ದಾರೆ.