ದೇಶವನ್ನು ಸಾಲದ ಸುಳಿಯಲ್ಲಿ ಮುಳುಗಿಸಿದ ನರೇಂದ್ರ ಮೋದಿ : ಎಸ್.ಮನೋಹರ್

Update: 2025-04-09 00:04 IST
ದೇಶವನ್ನು ಸಾಲದ ಸುಳಿಯಲ್ಲಿ ಮುಳುಗಿಸಿದ ನರೇಂದ್ರ ಮೋದಿ : ಎಸ್.ಮನೋಹರ್
  • whatsapp icon

ಬೆಂಗಳೂರು: ಅಚ್ಚೇದಿನ್ ಹೆಸರಿನಲ್ಲಿ ನರೇಂದ್ರ ಮೋದಿಯ ದುರಾಡಳಿತದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಹೆಚ್ಚಾಗುತ್ತಿದೆ. ಪ್ರತಿಯೊಬ್ಬ ವ್ಯಕ್ತಿಯ ಮೇಲೂ ಲಕ್ಷಾಂತರ ರೂಪಾಯಿ ಸಾಲದ ಹೊರೆಯನ್ನು ಹೊರಿಸಿದ್ದಾರೆ. ಆದರೂ ಸಹ 10 ವರ್ಷಗಳಲ್ಲಿ ಉತ್ತಮ ಆಡಳಿತ ನೀಡಿದ್ದೇವೆನ್ನುವ ಸ್ವಯಂಘೋಷಿತ ಘೋಷಣೆ ಮಾಡಿಕೊಂಡು, ಇಡೀ ದೇಶವನ್ನೇ ಸಾಲದ ಸುಳಿಯಲ್ಲಿ ಮುಳುಗಿಸಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ನಗರದಲ್ಲಿ ಕೇಂದ್ರ ಬಿಜೆಪಿ ಸರಕಾರ ಡೀಸೆಲ್, ಪೆಟ್ರೋಲ್, ಅಡುಗೆ ಅನಿಲ ದರ ಏರಿಕೆ ಮಾಡಿರುವುದನ್ನು ವಿರೋಧಿಸಿ ಕೆಪಿಸಿಸಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶದಲ್ಲಿ ಈಗಾಗಲೇ ದಾಖಲೆ ಮಟ್ಟದಲ್ಲಿ ಡೀಸೆಲ್, ಪೆಟ್ರೋಲ್ ದರ ಏರಿಕೆ ಆಗಿದೆ. ಅಡುಗೆ ಅನಿಲ ದರ ಏರಿಕೆಯಿಂದ ಬಡವರ ಜೀವನಕ್ಕೆ ಬಾರಿ ಹೊಡೆತ ನೀಡುತ್ತಿದೆ. ಇದು ಭ್ರಷ್ಟ ಕೇಂದ್ರ ಬಿಜೆಪಿ ಸರಕಾರದ ಸಾಧನೆಯಾಗಿದೆ ಎಂದು ಹೇಳಿದರು.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಪ್ರಹ್ಲಾದ್ ಜೋಶಿ ರಾಜ್ಯ ಸರಕಾರದ ಬೆಲೆ ಏರಿಕೆಯನ್ನು ಖಂಡಿಸಿದ್ದಾರೆ. ಆದರೆ ಕೇಂದ್ರ ಬಿಜೆಪಿ ಸರಕಾರ ಏರಿಸುತ್ತಿರುವಾಗ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸುವ ಅಥವಾ ಬೆಲೆ ಏರಿಕೆಯನ್ನು ತಡೆಯುವ ಪ್ರಯತ್ನವನ್ನು ಮಾಡುತ್ತಿಲ್ಲ. ಮೋದಿಯ ಸರ್ವಾಧಿಕಾರಿ ಆಡಳಿತದಲ್ಲಿ ಕೇಂದ್ರದ ಮಂತ್ರಿಗಳಾಗಿ ರಾಜ್ಯಕ್ಕೆ ರಾಷ್ಟ್ರಕ್ಕೆ ಇವರು ದ್ರೋಹವನ್ನು ಬಗೆಯುತ್ತಿದ್ದಾರೆ. ಇವರು ಬೆಲೆ ಏರಿಕೆಯನ್ನು ಖಂಡಿಸುವ ಶಕ್ತಿಯನ್ನು ಕಳೆದುಕೊಂಡಿದ್ದಾರೆ ಎಂದು ಮನೋಹರ್ ಹೇಳಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಎ.ಆನಂದ್, ಪ್ರಕಾಶ್, ಚಂದ್ರಶೇಖರ್, ಕೆ.ಟಿ.ನವೀನ್, ಚಿನ್ನಿ ಪ್ರಕಾಶ್, ಓಬಳೇಶ್, ಸುಂಕದಕಟ್ಟೆ ನವೀನ್, ಕುಶಾಲ್ ಹರುವೇಗೌಡ, ಪುಟ್ಟರಾಜು, ಸಾಯಿ ನವೀನ್, ಉಮೇಶ್ ರವಿ, ವಾಸು, ನವೀನ್ ಗೌಡ ರಾಜು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News