ರಾಜ್ಯ ಫಾರ್ಮಸಿ ಪರಿಷತ್ತಿನ ಆಡಳಿತ ಮಂಡಳಿ ರದ್ದುಗೊಳಿಸಿ ಸರಕಾರ ಆದೇಶ
Update: 2025-04-09 20:20 IST
ಬೆಂಗಳೂರು : ಕರ್ನಾಟಕ ರಾಜ್ಯ ಫಾರ್ಮಸಿ ಪರಿಷತ್ತಿನ ಆಡಳಿತ ಮಂಡಳಿಯನ್ನು ರದ್ದುಗೊಳಿಸಿದ್ದು, ಸುಗಮ ಕಾರ್ಯನಿರ್ವಹಣೆಗಾಗಿ ಪರಿಷತ್ತಿಗೆ ಆಡಳಿತಾಧಿಕಾರಿಯನ್ನು ನೇಮಿಸಿ ರಾಜ್ಯ ಸರಕಾರವು ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯ ಫಾರ್ಮಸಿ ಪರಿಷತ್ತಿಗೆ ಚುನಾವಣೆ ನಡೆಸಿ ಹೊಸ ಆಡಳಿತ ಮಂಡಳಿಯನ್ನು ಪುನರ್ ರಚಿಸುವವರೆಗೆ ಫಾರ್ಮಸಿ ಕಾಯ್ದೆಯಡಿ ಸರಕಾರವು ರಚಿಸಲಾಗಿದ್ದ ಕರ್ನಾಟಕ ರಾಜ್ಯ ಫಾರ್ಮಸಿ ಪರಿಷತ್ತಿನ ಆಡಳಿತ ಮಂಡಳಿಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ರದ್ದುಗೊಳಿಸಲಾಗಿದೆ.
ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಕರ್ನಾಟಕ ರಾಜ್ಯ ಫಾರ್ಮಸಿ ಪರಿಷತ್ತಿನ ಸುಗಮ ಕಾರ್ಯನಿರ್ವಹಣೆಗಾಗಿ ಆಯುಕ್ತರು, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇವರನ್ನು ಆಡಳಿತಾಧಿಕಾರಿಯನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಿಸಿ ಆದೇಶಿಸಿದೆ.