ನ್ಯಾ.ಜಾನ್ ಮೈಕಲ್ ಕುನ್ಹಾ ವಿಚಾರಣಾ ಆಯೋಗದ ಅವಧಿ ವಿಸ್ತರಣೆ: ಸರಕಾರ ಆದೇಶ
Update: 2025-04-09 22:18 IST
ಬೆಂಗಳೂರು : ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದಾಗಿ ರೋಗಿಗಳು ಮರಣ ಹೊಂದಿದ ಘಟನೆಗೆ ಸಂಬಂಧಿಸಿದಂತೆ ಪರಿಶೀಲಿಸಿ ಸರಕಾರಕ್ಕೆ ವರದಿ ನೀಡಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ರಚಿಸಲಾಗಿರುವ ವಿಚಾರಣಾ ಆಯೋಗದ ಅವಧಿಯನ್ನು ಪ್ರಸಕ್ತ ಸಾಲಿನ ಎ.1 ರಿಂದ ಜು.31ರವರೆಗೆ ವಿಸ್ತರಿಸಿ ಬುಧವಾರ ರಾಜ್ಯ ಸರಕಾರ ಆದೇಶ ಹೊರಡಿಸಲಾಗಿದೆ.