ಡಾ.ನಾಗಲಕ್ಷ್ಮೀ ಚೌಧರಿಗೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆಯಿಂದ ಪ್ರಶಂಸೆ

Update: 2025-04-15 23:40 IST
ಡಾ.ನಾಗಲಕ್ಷ್ಮೀ ಚೌಧರಿಗೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆಯಿಂದ ಪ್ರಶಂಸೆ
  • whatsapp icon

ಬೆಂಗಳೂರು : ದೇಶದ ಎಲ್ಲ ರಾಜ್ಯಗಳ ಮಹಿಳಾ ಆಯೋಗದ ಕೆಲಸಗಳಿಗಿಂತ ವಿಭಿನ್ನವಾಗಿ ಕೆಲಸ ನಿರ್ವಹಿಸುತ್ತಿರುವ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಬಡವರ, ಅಸಹಾಯಕ ಹಾಗೂ ಗ್ರಾಮೀಣ ಭಾಗದ ಮಹಿಳೆಯರ ಧ್ವನಿಯಾಗಿ ನಾಡಿನಾದ್ಯಂತ ಮಾಡಿದ ಜನಮೆಚ್ಚುಗೆಯ ಕೆಲಸಗಳಿಗೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ವಿಜಯ ಕಿಶೋ‌ರ್ ರಹತ್ಕ‌ರ್ ಅವರು ಪ್ರಶಂಸಿಸಿ ಅಭಿನಂದಿಸಿದ್ದಾರೆ.

ಇತ್ತೀಚಿಗೆ ಉತ್ತರ ಪ್ರದೇಶದ ಆಯೋಧ್ಯೆಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗ ಮತ್ತು ಉತ್ತರ ಪ್ರದೇಶ ಮಹಿಳಾ ಆಯೋಗದ ಸಂಯುಕ್ತಾಶ್ರಯದಲ್ಲಿ ಎಲ್ಲ ರಾಜ್ಯಗಳ ಮಹಿಳಾ ಆಯೋಗದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗಾಗಿ ನಡೆದ ಕಾರ್ಯಕ್ಷಮತಾ ಕಾರ್ಯಾಗಾರ ಹಾಗೂ ಕಾರ್ಯಕಾರಿಣಿ ಸಭೆಯಲ್ಲಿ ಸ್ಮರಣಿಕೆ ನೀಡಿ ಗೌರವಿಸಿದರು.

ಶೋಷಿತ, ಬಡ ಮಹಿಳೆಯರ ಪರವಾಗಿ ಕರ್ನಾಟಕ ರಾಜ್ಯ ಮಹಿಳಾ ಆಯೋಗವು ತುರ್ತಾಗಿ ಸ್ಪಂದಿಸಿ, ಅವರಿಗೆ ನ್ಯಾಯ ಒದಗಿಸಿಕೊಡಲು ಶ್ರಮಿಸುತ್ತಿದೆ ಎಂದು ಅವರು ಶ್ಲಾಘಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News