ಬಿಡದಿಯ ಕೇತಗಾನಹಳ್ಳಿ ಬಳಿ ಸರಕಾರಿ ಜಮೀನು ಒತ್ತುವರಿ ಆರೋಪ : ಎಚ್‌ಡಿಕೆಯನ್ನು ಪ್ರತಿವಾದಿಯಾಗಿಸಲು ಹೈಕೋರ್ಟ್ ಅನುಮತಿ

Update: 2025-04-18 00:31 IST
ಬಿಡದಿಯ ಕೇತಗಾನಹಳ್ಳಿ ಬಳಿ ಸರಕಾರಿ ಜಮೀನು ಒತ್ತುವರಿ ಆರೋಪ : ಎಚ್‌ಡಿಕೆಯನ್ನು ಪ್ರತಿವಾದಿಯಾಗಿಸಲು ಹೈಕೋರ್ಟ್ ಅನುಮತಿ
  • whatsapp icon

ಬೆಂಗಳೂರು: ಬಿಡದಿಯ ಕೇತಗಾನಹಳ್ಳಿ ಬಳಿ ಸರಕಾರಿ ಜಮೀನು ಒತ್ತುವರಿ ಆರೋಪ ಪ್ರಕರಣದಲ್ಲಿ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯಲ್ಲಿ ಭಾಗಿಯಾಗಲು ಎಚ್.ಡಿ.ಕುಮಾರಸ್ವಾಮಿಗೆ ಹೈಕೋರ್ಟ್ ಅನುಮತಿ ನೀಡಿದೆ.

ನ್ಯಾಯಾಂಗ ನಿಂದನೆ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ನ್ಯಾಯಾಂಗ ನಿಂದನೆಯಲ್ಲಿ ಪ್ರತಿವಾದಿ ಆರೋಪಿಯಾಗಿ ಕುಮಾರಸ್ವಾಮಿ ಸೇರ್ಪಡೆಗೆ ನ್ಯಾಯಪೀಠ ಅವಕಾಶ ನೀಡಿದೆ.

ಎಚ್‌ಡಿಕೆ ವಾದ ಪರಿಗಣಿಸಲು ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು. ಹೀಗಾಗಿ ಎಚ್‌ಡಿಕೆ ಪರ ಹಿರಿಯ ವಕೀಲ ಉದಯ್ ಹೊಳ್ಳಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ನ್ಯಾಯಾಂಗ ನಿಂದನೆ ಅರ್ಜಿಯಲ್ಲಿ ಸೂಕ್ತ ತಿದ್ದುಪಡಿಗೆ ಸಮಾಜ ಪರಿವರ್ತನಾ ಸಮುದಾಯ ಪರ ವಕೀಲರಿಗೆ ಸೂಚನೆ ನೀಡಿ ವಿಚಾರಣೆಯನ್ನು ಜೂನ್ 10 ಕ್ಕೆ ಮುಂದೂಡಿದೆ.

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News