ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣ : ಓರ್ವ ವಶಕ್ಕೆ
Update: 2025-04-22 22:45 IST
ಬೆಂಗಳೂರು : ಜಯ ಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಮೇಲಿನ ಗುಂಡಿನ ದಾಳಿ ಪ್ರಕರಣ ಸಂಬಂಧ ಈ ಹಿಂದೆ ಗನ್‍ಮ್ಯಾನ್ ಆಗಿ ಕೆಲಸ ಮಾಡಿದ್ದ ವ್ಯಕ್ತಿಯೊಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
ನಾಲ್ಕು ದಿನಗಳ ಹಿಂದೆ ಮಧ್ಯರಾತ್ರಿ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆದಿತ್ತು. ಈ ಹಿಂದೆ ಗನ್‍ಮ್ಯಾನ್ ಆಗಿ ಕೆಲಸ ಮಾಡಿದ್ದ ವಿಠ್ಠಲರಾವ್ ಎಂಬುವವರನ್ನು ತೀವ್ರವಾಗಿ ವಿಚಾರಣೆಗೊಳಪಡಿಸಲಾಗಿದೆ. ಜತೆಗೆ, ಮತ್ತೆ ಕೆಲ ಮಂದಿಗೆ ವಿಚಾರಣೆಗೆ ಹಾಜರಾಗುವಂತೆ ಬಿಡದಿಯ ಪೊಲೀಸರು ನೋಟೀಸ್ ನೀಡಿದ್ದಾರೆ.
ಗುಂಡಿನ ದಾಳಿ ನಡೆದ ಸ್ಥಳದಲ್ಲಿ ಒಂದು ಮೊಬೈಲ್ ಜಪ್ತಿ ಮಾಡಲಾಗಿದ್ದು, ಅದನ್ನು ಪರಿಶೀಲನೆ ನಡೆಸಿದಾಗ ಪೊಲೀಸರ ದಿಕ್ಕು ತಪ್ಪಿಸುವ ಸಲುವಾಗಿ ಗುಂಡಿನ ದಾಳಿಯಾದ ಬಳಿಕ ಮೊಬೈಲ್ ಅನ್ನು ತಂದು ಅಲ್ಲಿ ಇಟ್ಟಿರುವುಸು ಗೊತ್ತಾಗಿದೆ. ಈ ಸಂಬಂಧ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.