ಮುಸ್ಲಿಮರ ವಿವಾಹ ನೋಂದಣಿ ವಿಚಾರ | ಮಾಹಿತಿ ನೀಡದ ಸರಕಾರದ ವಿರುದ್ಧ ಹೈಕೋರ್ಟ್ ಅಸಮಾಧಾನ
Update: 2025-04-22 23:54 IST
ಬೆಂಗಳೂರು : ಮುಸ್ಲಿಮರ ವಿವಾಹ ನೋಂದಣಿ ಹಾಗೂ ಮುಸ್ಲಿಮ್ ದಂಪತಿಗೆ ವಿವಾಹ ನೋಂದಣಿ ಪ್ರಮಾಣಪತ್ರ ವಿತರಿಸುವ ಅಧಿಕಾರವನ್ನು ಕರ್ನಾಟಕ ರಾಜ್ಯ ವಕ್ಫ್ ಮಂಡಳಿಗೆ ನೀಡಿದ್ದು ಹೇಗೆ? ಎಂಬ ಬಗ್ಗೆ ಉತ್ತರ ನೀಡದ ರಾಜ್ಯ ಸರಕಾರದ ವಿರುದ್ಧ ಹೈಕೋರ್ಟ್ ಅಸಮಾಧಾನ ಹೊರ ಹಾಕಿದೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿ ಮೂಲಕ ರಾಜ್ಯ ಸರಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಬೆಂಗಳೂರಿನ ಎ.ಆಲಂ ಪಾಷಾ ಎಂಬವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾ. ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿ, ಉತ್ತರ ನೀಡಲು ಜೂ.11ರವರೆಗೆ ಗಡುವು ವಿಧಿಸಿ ವಿಚಾರಣೆ ಮುಂದೂಡಿದೆ.