ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು : ನಟಿ ರಮ್ಯಾ

Update: 2024-06-14 17:04 GMT

ಬೆಂಗಳೂರು: ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಯಾರೂ ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಬಾರದು ಎಂದು ನಟಿ ಹಾಗೂ ರಾಜಕಾರಣಿ ರಮ್ಯಾ ತಿಳಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರ ಬಂಧನಕ್ಕೆ ಸಂಬಂಧಿಸಿದಂತೆ ತಮ್ಮ ಅಧಿಕೃತ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಪ್ರತಿಕ್ರಿಯಿಸಿ ಪೋಸ್ಟ್ ಹಾಕಿರುವ ಅವರು, ಕಾನೂನನ್ನು ಯಾರೂ ಕೈಗೆತ್ತಿಕೊಳ್ಳಬಾರದು. ಯಾವುದೇ ಕಾರಣಕ್ಕೂ ನೀವು ಜನರನ್ನು ಹೊಡೆಯಲು ಅಥವಾ ಕೊಲ್ಲಲು ಮುಂದಾಗಬೇಡಿ. ನ್ಯಾಯ ಸಿಗುತ್ತದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ನಿಮಗೆ ಗೊಂದಲವಿದ್ದರೂ ಕೂಡ ಒಂದು ದೂರು ನೀಡಿದರೆ ಸಾಕು ಎಂದು ಹೇಳಿದ್ದಾರೆ.

ಪೊಲೀಸ್ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿರುವ ಬಗ್ಗೆ ಮೆಚ್ಚುಗೆ ಮತ್ತು ಗೌರವದ ಮಾತು. ಇದು ಕೃತಜ್ಞತೆಯಿಲ್ಲದ ಕೆಲಸ ಮತ್ತು ಅವರು ತಮ್ಮ ಕೆಲಸವನ್ನು ಅತ್ಯುತ್ತಮವಾಗಿ ಮಾಡುತ್ತಿದ್ದಾರೆ. ಅವರು ರಾಜಕೀಯ ಪಕ್ಷಗಳ ಒತ್ತಡಕ್ಕೆ ಮಣಿಯುವುದಿಲ್ಲ. ಕಾನೂನು ಮತ್ತು ನ್ಯಾಯದಲ್ಲಿ ಜನರು ನಂಬಿಕೆ ಇಡುವಂತೆ ಮಾಡುತ್ತಿದ್ದಾರೆ ಎಂದು ನಾನು ನಿಜವಾಗಿಯೂ ಭಾವಿಸುತ್ತೇನೆ ಎಂದು ರಮ್ಯಾ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News