ಜಿಲ್ಲಾ ಮಟ್ಟದಲ್ಲಿ ಪ್ರಥಮ ಪಿಯುಸಿ ಪೂರಕ ಪರೀಕ್ಷೆ ನಡೆಸಲು ಸೂಚನೆ

Update: 2024-03-26 13:26 GMT

ಬೆಂಗಳೂರು: ಪ್ರಥಮ ಪಿಯುಸಿಯ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿವರ್ಷದಂತೆ ಜಿಲ್ಲಾ ಮಟ್ಟದಲ್ಲಿಯೇ ಪೂರಕ ಪರೀಕ್ಷೆಯನ್ನು ನಡೆಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಜಿಲ್ಲ ಉಪನಿರ್ದೇಶಕರಿಗೆ ಸುತ್ತೋಲೆ ಹೊರಡಿಸಿದೆ.

ಮಾ.30ರಂದು ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯ ಶುಲ್ಕವನ್ನು ಪಾವತಿ ಮಾಡಲು ಎ.20ರವರೆಗೆ ಅವಕಾಶವನ್ನು ಕಲ್ಪಿಸಬೇಕು. ಮೇ 20ರಿಂದ ಮೇ 31ರೊಳಗೆ ಪೂರಕ ಪರೀಕ್ಷೆಯನ್ನು ನಡೆಸಬೇಕು. ಜೂ.6ರಂದು ಪೂರಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಬೇಕು ಎಂದು ಸೂತ್ತೋಲೆಯಲ್ಲಿ ತಿಳಿಸಿದೆ.

ಪಿಯುಸಿಯ ಪೂರಕ ಪರೀಕ್ಷೆಯನ್ನು ನಡೆಸುವುದು ಜಿಲ್ಲಾ ಉಪನಿರ್ದೇಶಕರ ಜವಾಬ್ದಾರಿಯಾಗಿದೆ. ಪೂರಕ ಪರೀಕ್ಷೆಯ ಕುರಿತು ಜಿಲ್ಲಾ ಉಪನಿರ್ದೇಶಕರು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಾಂಶುಪಾಲರಿಗೆ ಸೂಚಿಸಬೇಕು. ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು https://kseab.karnataka.gov.in/english ನಲ್ಲಿ ಪ್ರಕಟಿಸಲಾಗಿದೆ ಎಂದು ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News