ಬೆಂಗಳೂರಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ಪ್ರಕರಣ: ಮಹಾನಗರಗಳಲ್ಲಿ ಇಂತಹ ಘಟನೆಗಳು ಆಗುತ್ತಿರುತ್ತವೆ : ಪರಮೇಶ್ವರ್

Update: 2025-04-07 23:57 IST
ಬೆಂಗಳೂರಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ಪ್ರಕರಣ:  ಮಹಾನಗರಗಳಲ್ಲಿ ಇಂತಹ ಘಟನೆಗಳು ಆಗುತ್ತಿರುತ್ತವೆ  : ಪರಮೇಶ್ವರ್
  • whatsapp icon

ಬೆಂಗಳೂರು : ಇಲ್ಲಿನ ಸುದ್ದೆಗುಂಟೆ ಪಾಳ್ಯದಲ್ಲಿ ಯುವತಿಗೆ ಲೈಂಗಿಕ ಕಿರುಕುಳ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ. ಆದರೆ, ಇಷ್ಟುದೊಡ್ಡನಗರಗಳಲ್ಲಿ ಅಲ್ಲೊಂದು ಇಲ್ಲೊಂದು ಇಂತಹ ಘಟನೆ ನಡೆಯುತ್ತವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಸೋಮವಾರ ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ಇಷ್ಟು ದೊಡ್ಡ ಸಿಟಿಯಲ್ಲಿ ಅಲ್ಲಿ ಇಲ್ಲಿ ಇಂತಹ ಒಂದೊಂದು ಘಟನೆಗಳು ಆಗುತ್ತವೆ. ನಿತ್ಯವೂ ಪೊಲೀಸ್ ಆಯುಕ್ತರಿಗೆ ಎಚ್ಚರಿಕೆಯಿಂದ ಇರಬೇಕು, ಬೀಟ್ ವ್ಯವಸ್ಥೆ ಚೆನ್ನಾಗಿ ಆಗಬೇಕು ಎಂದು ಹೇಳುತ್ತೇನೆ. ಪ್ರತೀ ಪ್ರದೇಶದಲ್ಲಿ ನಿಗಾವಹಿಸಬೇಕೆಂದು ಪೊಲೀಸರಿಗೆ ಸೂಚಿಸುತ್ತಿರುತ್ತೇನೆ ಎಂದರು.

ಬೆಂಗಳೂರು ಮಾತ್ರವಲ್ಲದೆ, ರಾಜ್ಯದಲ್ಲಿ ನಿರಂತರವಾಗಿ ಪೊಲೀಸ್ ಇಲಾಖೆ ಕೆಲಸ ಮಾಡುತ್ತಿದೆ. ದಿನದ 24 ಗಂಟೆಯೂ ಮಳೆ, ಚಳಿ ಎನ್ನದೇ ಪೊಲೀಸರು ಕೆಲಸ ಮಾಡುತ್ತಾರೆ. ಇಷ್ಟು ದೊಡ್ಡ ನಗರದಲ್ಲಿ ಅಲ್ಲೊಂದು ಇಲ್ಲೊಂದು ಘಟನೆ ಆಗುತ್ತವೆ. ಅದಕ್ಕೆ ನಾವು ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಪರಮೇಶ್ವರ್ ಹೇಳಿದರು.

ಏನಿದು ಘಟನೆ?: ಎ.4ರ ಬೆಳಗಿನ ಜಾವ 2 ಗಂಟೆಗೆ ರಸ್ತೆಯಲ್ಲಿ ಒಬ್ಬಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ಯುವತಿ ಮೇಲೆ ವ್ಯಕ್ತಿಯೊಬ್ಬ, ಆಕೆಯ ಖಾಸಗಿ ಅಂಗಾಂಗ ಸ್ಪರ್ಶಿಸಿ, ಅನುಚಿತ ವರ್ತನೆ ಮಾಡಿರುವ ಘಟನೆ ಸಿಸಿಟಿಟಿಯಲ್ಲಿ ಸೆರೆಯಾಗಿದೆ. ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ದುಷ್ಕರ್ಮಿ ವಿರುದ್ಧ ಸುದ್ದಗುಂಟೇಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News