ವಿಧಾನಸಭೆಯಲ್ಲಿ ಅನರ್ಹತಾ ನಿವಾರಣಾ ತಿದ್ದುಪಡಿ ವಿಧೇಯಕ ಅಂಗೀಕಾರ

Update: 2024-02-23 14:24 GMT

ಬೆಂಗಳೂರು : ವಿಧಾನಸಭೆ ಮತ್ತು ವಿಧಾನಪರಿಷತ್‍ನ ಸದಸ್ಯರುಗಳು, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ಸಲಹೆಗಾರ, ಯಾವುದೇ ಆಯೋಗದ ಅಧ್ಯಕ್ಷ ಅಥವಾ ಸದಸ್ಯರಾಗಲು ಅವಕಾಶ ಕಲ್ಪಿಸುವ ಕರ್ನಾಟಕ ವಿಧಾನಮಂಡಲ ಅನರ್ಹತಾ ನಿವಾರಣಾ ತಿದ್ದುಪಡಿ ವಿಧೇಯಕ-2024ಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರಯಿತು.

ಶುಕ್ರವಾರ ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಪ್ರತಿಪಕ್ಷಗಳ ನಡೆಸುತ್ತಿದ್ದ ಧರಣಿ ಮಧ್ಯೆಯೇ ಕಾನೂನು ಸಚಿವ ಎಚ್.ಕೆ.ಪಾಟೀಲ್ ಈ ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು.

ವಿಧಾನಸಭೆ ಅಥವಾ ವಿಧಾನ ಪರಿಷತ್‍ನ ಸದಸ್ಯರಾಗಿರುವವರು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳ ಸಲಹೆಗಾರರು, ಯಾವುದೇ ಆಯೋಗದ ಅಧ್ಯಕ್ಷರು ಅಥವಾ ಸದಸ್ಯರು ಮತ್ತು ಕರ್ನಾಟಕ ರಾಜ್ಯ ಪರಿವರ್ತನಾ ಸಂಸ್ಥೆಯ ಉಪಾಧ್ಯಕ್ಷರ ಹುದ್ದೆಗೆ ನೇಮಕಗೊಳ್ಳುವುದಕ್ಕೆ ಅನರ್ಹತೆಯನ್ನು ವಿಧಿಸಿರುವುದರಿಂದ ವಿನಾಯ್ತಿ ನೀಡಲು ಈ ಕಾಯ್ದೆಯನ್ನು ಮಂಡಿಸಲಾಗುತ್ತಿದೆ ಎಂದು ಹೇಳಿದರು.

ಈ ಕಾಯ್ದೆ ಜಾರಿಯಾಗುವುದರಿಂದ ವಿಧಾನಸಭೆ ಸದಸ್ಯರು ಅಥವಾ ಪರಿಷತ್ ಸದಸ್ಯರು ಯಾವುದೇ ಅಧ್ಯಕ್ಷರು, ಸದಸ್ಯರು, ಮುಖ್ಯಮಂತ್ರಿ, ಮತ್ತು ಉಪಮುಖ್ಯಮಂತ್ರಿ ಸಲಹೆಗಾರರಾಗಲು ಅವಕಾಶ ಸಿಗಲಿದೆ. ಹಾಗೆಯೇ ಕರ್ನಾಟಕ ರಾಜ್ಯ ಪರಿವರ್ತನಾ ಸಂಸ್ಥೆಯ ಉಪಾಧ್ಯಕ್ಷರ ಹುದ್ದೆಗೂ ಶಾಸಕರನ್ನು ನೇಮಿಸುವುದಕ್ಕೆ ಈ ಕಾಯ್ದೆ ಅವಕಾಶ ಕಲ್ಪಿಸುತ್ತದೆ. ಇದಕ್ಕೆ ಸದನ ಒಪ್ಪಿಗೆ ನೀಡಬೇಕು ಎಂದು ಕೋರಿದರು.

ಇದಾದ ಬಳಿಕ ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಕರ್ನಾಟಕ ವಿಧಾನಮಂಡಲದ ಅನರ್ಹತಾ ನಿವಾರಣೆ ತಿದ್ದುಪಡಿ ವಿಧೇಯಕವನ್ನು ಧ್ವನಿ ಮತದ ಮೂಲಕ ಅಂಗೀಕಾರಿಸಲಾಯಿತು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News