ಪರಿಷತ್ತಿನಲ್ಲಿ ಹಲವು ವಿಧೇಯಕಗಳ ಅಂಗೀಕಾರ

ಬೆಂಗಳೂರು : ವಿಧಾನ ಸಭೆಯಿಂದ ತಿದ್ದುಪಡಿಯೊಂದಿಗೆ ಅಂಗೀಕೃತ ರೂಪದಲ್ಲಿರುವ 2025ನೇ ಸಾಲಿನ ‘ಕರ್ನಾಟಕ ಗಿರವಿದಾರರ (ತಿದ್ದುಪಡಿ) ವಿಧೇಯಕ’, ‘ಕರ್ನಾಟಕ ಲೇವಾದೇವಿದಾರರ (ತಿದ್ದುಪಡಿ) ವಿಧೇಯಕ’, ‘ಕರ್ನಾಟಕ ಮಿತಿಮೀರಿದ ಬಡ್ಡಿ ವಿಧಿಸುವಿಕೆಯ ನಿಷೇಧ (ತಿದ್ದುಪಡಿ) ವಿಧೇಯಕ’ ಹಾಗೂ ‘ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ(ನಿಯಂತ್ರಣ ಮತ್ತು ಅಭಿವೃದ್ಧಿ)(ತಿದ್ದುಪಡಿ) ವಿಧೇಯಕ’ಗಳು ವಿಧಾನಪರಿಷತ್ತಿನ ಬುಧವಾರದ ಅಧಿವೇಶನದ ವೇಳೆಯಲ್ಲಿ ಮಂಡನೆಯಾದವು.
ಈ ವಿಧೇಯಕಗಳನ್ನು ಸದನಲ್ಲಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಮಂಡಿಸಿದರು. ವಿಧಾನ ಪರಿಷತ್ತಿನ ಸದಸ್ಯರಾದ ಕೇಶವ ಪ್ರಸಾದ್, ಟಿ.ಎ.ಶರವಣ, ಪಿ.ಎಚ್.ಪೂಜಾರ್, ನವೀನ್, ಸಿ.ಟಿ.ರವಿ, ಪುಟ್ಟಣ್ಣಯ್ಯ, ಪ್ರತಾಪ್ ಸಿಂಹ ನಾಯಕ್, ಎನ್ ರವಿಕುಮಾರ್, ಸುಧಾಮದಾಸ್ ಮತ್ತು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರುಗಳು ಪರ್ಯಾಲೋಚಿಸಿದ ನಂತರ ಈ ವಿಧೇಯಕಗಳನ್ನು ಸಭಾಪತಿಗಳು ಅಂಗೀಕರಿಸಿದರು.