ವಿಧಾನ ಪರಿಷತ್ತಿನಲ್ಲಿ ಮೂರು ವಿಧೇಯಕಗಳಿಗೆ ಅಂಗೀಕಾರ
Update: 2024-02-22 14:38 GMT
ಬೆಂಗಳೂರು : ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ 2024ನೆ ಸಾಲಿನ ‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ತಿದ್ದುಪಡಿ) ವಿಧೇಯಕ’, ‘ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ(ತಿದ್ದುಪಡಿ) ವಿಧೇಯಕ’ ಮತ್ತು ‘ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್(ತಿದ್ದುಪಡಿ) ವಿಧೇಯಕ’ವನ್ನು ವಿಧಾನ ಪರಿಷತ್ತಿನಲ್ಲಿ ಗುರುವಾರದಂದು ಅಂಗೀಕಾರ ಮಾಡಲಾಯಿತು.