ಅಶ್ಲೀಲ ವಿಡಿಯೋಗಳ ಪೆನ್‌ ಡ್ರೈವ್‌ ಪ್ರಕರಣ | ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ದೂರು

Update: 2024-05-02 14:25 IST
ಅಶ್ಲೀಲ ವಿಡಿಯೋಗಳ ಪೆನ್‌ ಡ್ರೈವ್‌ ಪ್ರಕರಣ | ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ದೂರು
  • whatsapp icon

ಬೆಂಗಳೂರು : ಅಶ್ಲೀಲ ವಿಡಿಯೋಗಳ ಪೆನ್‌ ಡ್ರೈವ್‌ ಪ್ರಕರಣ ಸಂಬಂಧ ಮಹಿಳೆಯೊಬ್ಬರ ಮೇಲೆ ದೌರ್ಜನ್ಯವೆಸಗಿ ಕೊಲೆ ಬೆದರಿಕೆ ಹಾಕಿರುವ ಆರೋಪದ ಅಡಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ದೂರು ದಾಖಲಾಗಿರುವುದಾಗಿ ವರದಿಯಾಗಿದೆ.

ಸಂಸದ ಪ್ರಜ್ವಲ್‌ ಹಾಗೂ ಶಾಸಕ ಎಚ್‌.ಡಿ.ರೇವಣ್ಣ ವಿರುದ್ಧ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಈ ಸಂಬಂಧ ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ಮಹಿಳೆಯೊಬ್ಬರು ಈಗಾಗಲೇ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಎಸ್​ಐಟಿ ರಚನೆ ಮಾಡಿದ್ದು, ದೂರು  ಆಧರಿಸಿ ಎಸ್ಐಟಿ ತಂಡ ಈಗಾಗಲೇ ತನಿಖೆಯನ್ನು ಚುರುಕುಗೊಳಿಸಿದೆ.

ಈ ಮದ್ಯೆ  ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಬ್ಬ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಈ ದೂರಿನ ತನಿಖೆಯನ್ನೂ ಎಸ್ಐಟಿ ಕೈಗೆತ್ತಿಕೊಂಡಿದೆ.

ಈ ಸಂಬಂಧ ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ್ ಅವರು, ' ಲೈಂಗಿಕ ಹಗರಣ ಸಂಬಂಧ ಮತ್ತೊಬ್ಬ ಮಹಿಳೆ ದೂರು ನೀಡಿದ್ದಾರೆ. ಮಹಿಳೆಯರು ಧೈರ್ಯವಾಗಿ ಮುಂದೆ ಬಂದು ದೂರು ನೀಡಬಹುದು.  ಸರ್ಕಾರ  ತಮಗೆ ಎಲ್ಲ ರೀತಿಯ ಭದ್ರತೆ ನೀಡಲಿದೆ' ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News