ಶಿಕ್ಷಣದೊಂದಿಗೆ ವ್ಯಕ್ತಿತ್ವ ವಿಕಸನ ಎನ್‍ಎಸ್‍ಎಸ್‍ನ ಉದ್ದೇಶ : ರಾಜ್ಯಪಾಲ ಗೆಹ್ಲೋಟ್

Update: 2025-03-17 22:34 IST
Photo of Thawar Chand Gehlot

ಥಾವರ್ ಚಂದ್ ಗೆಹ್ಲೋಟ್

  • whatsapp icon

ಬೆಂಗಳೂರು : ಶಿಕ್ಷಣದೊಂದಿಗೆ ವ್ಯಕ್ತಿತ್ವ ವಿಕಸನ ಮತ್ತು ಸೇವೆ ನೀಡುವುದೇ ಎನ್‍ಎಸ್‍ಎಸ್‍ನ ಉದ್ದೇಶವಾಗಿದ್ದು, ವಿದ್ಯಾರ್ಥಿಗಳು ಎನ್‍ಎಸ್‍ಎಸ್‍ಗೆ ಸೇರ್ಪಡೆಗೊಂಡು ಸಮಾಜಕ್ಕೆ ಕೊಡುಗೆ ನೀಡಲು ಮುಂದಾಗಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕರೆ ನೀಡಿದ್ದಾರೆ.

ಸೋಮವಾರ ಇಲ್ಲಿನ ರಾಜಭವನದ ಗಾಜಿನಮನೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ 2022-23ನೆ ಸಾಲಿನ ಎನ್‍ಎಸ್‍ಎಸ್ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಎನ್‍ಎಸ್‍ಎಸ್ ಸ್ವಯಂ ಸೇವಕರು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ, ಆರೋಗ್ಯ ಜಾಗೃತಿ ಕಾರ್ಯಕ್ರಮಗಳು, ಪರಿಸರ ಸಂರಕ್ಷಣೆ, ಸಾಮಾಜಿಕ ಸಾಮರಸ್ಯದಂತಹ ಕಾರ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಸಮಾಜ ಮತ್ತು ರಾಷ್ಟ್ರದ ಅಭಿವೃದ್ಧಿಗೆ ಗಮನಾರ್ಹ ಕೊಡುಗೆ ನೀಡುತ್ತಿದ್ದಾರೆ ಎಂದು ಅವರು ತಿಳಿಸಿದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ರಾಜ್ಯ ಒಲಂಪಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಕೆ. ಗೋವಿಂದರಾಜು ಮಾತನಾಡಿ, ಎನ್‍ಎಸ್‍ಎಸ್ ಸದಾ ಕಾಲ ರಚನಾತ್ಮಕವಾದ ಚಟುವಟಿಕೆಯಿಂದ ಕೂಡಿದ್ದು, ಮತ್ತಷ್ಟು ಚಟುವಟಿಕೆಯಿಂದ ಕಾರ್ಯನಿರ್ವಹಿಸಬೇಕು. ಹಾಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಎನ್‍ಎಸ್‍ಎಸ್‍ನಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.

ಇದೇ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಎನ್‍ಎಸ್‍ಎಸ್ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ ವಿಶ್ವವಿದ್ಯಾನಿಲಯಗಳು, ಸಂಯೋಜನಾಧಿಕಾರಿಗಳು, ಎನ್‍ಎಸ್‍ಎಸ್ ಘಟಕಗಳು ಸೇರಿ ಸ್ವಯಂ ಸೇವಕ/ಸೇವಕಿಯರಿಗೆ ಒಟ್ಟು 48 ಪ್ರಶಸ್ತಿಗಳನ್ನು ಪ್ರಧಾನ ಮಾಡಿದರು.

ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸರಕಾರದ ಕಾರ್ಯದರ್ಶಿ ರಂದೀಪ್ ಡಿ, ಇಲಾಖೆಯ ಆಯುಕ್ತÀ ಚೇತನ್ ಆರ್, ರಾಜ್ಯ ಎನ್‍ಎಸ್‍ಎಸ್. ಅಧಿಕಾರಿ ಡಾ. ಪ್ರತಾಪ್ ಲಿಂಗಯ್ಯ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News