ಕೇಂದ್ರ ಬಜೆಟ್‌-2024 | ಯುವ ಜನರ, ಮಹಿಳೆಯರ, ರೈತರ ಅಭಿವೃದ್ಧಿಗೆ ಬದ್ಧತೆಯ ಬಜೆಟ್ : ಪ್ರಹ್ಲಾದ್ ಜೋಶಿ ಶ್ಲಾಘನೆ

Update: 2024-07-23 17:21 GMT

PC : x/@JoshiPralhad

ಹೊಸದಿಲ್ಲಿ : ಎನ್‌ಡಿಎ ಸರ್ಕಾರ ನವಭಾರತ ನಿರ್ಮಾಣಕ್ಕೆ ಪ್ರಸ್ತುತದಲ್ಲಿ ಅತ್ಯುತ್ತಮ ಬಜೆಟ್ ಸಮರ್ಪಿಸಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಹ್ಲಾದ್ ಜೋಶಿ ಸಮರ್ಥಿಸಿಕೊಂಡಿದ್ದಾರೆ.

ಹೊಸದಿಲ್ಲಿಯಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಭಾರತದ ಆರ್ಥಿಕ ಪ್ರಗತಿ, ಸಾಮರ್ಥ್ಯದ ಜತೆಗೆ ಯುವಜನತೆ, ಮಹಿಳೆಯರು ಮತ್ತು ರೈತರ ಅಭಿವೃದ್ಧಿಯ ಬದ್ಧತೆಯನ್ನು ಈ ಬಜೆಟ್ ಸಾಬೀತುಪಡಿಸಿದೆ ಎಂದು ಪ್ರತಿಪಾದಿಸಿದರು.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಈ ಬಜೆಟ್ ವಿಶೇಷವಾಗಿ ಯುವ ಜನರಲ್ಲಿ ವಿಶ್ವಾಸವನ್ನು ತುಂಬುತ್ತದೆ. ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆ ಮಧ್ಯಮ, ಕೆಳ ವರ್ಗ ಮತ್ತು ಬಡ ಜನರಿಗೆ ಪ್ರಯೋಜನಕಾರಿ. ಮತ್ತಿದು ವಿಶ್ವದ ಅತ್ಯುತ್ತಮ ಯೋಜನೆಗಳಲ್ಲಿ ಒಂದಾಗಿದೆ ಎಂದು ಹೇಳಿದರು.

ಪ್ರಸ್ತುತ ಬಜೆಟ್‌ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಶಿಕ್ಷಣ, ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ. ಈ ಮೂಲಕ ವಿಕಸಿತ ಭಾರತಕ್ಕೆ ಮಾರ್ಗ ತೋರಿದ್ದಾರೆ ಎಂದರು.

ರೈತ ಸ್ನೇಹಿ, ತೆರಿಗೆ ಹೊರೆ ರಹಿತ ಬಜೆಟ್:

‘ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಸರಕಾರ ರೈತ ಸ್ನೇಹಿ, ತೆರಿಗೆ ಹೊರೆ ರಹಿತ, ಸರ್ವ ಜನಕೇಂದ್ರಿತ ಹಾಗೂ ದೇಶದ ಭವಿಷ್ಯ ಬರೆಯುವ ಸುಭದ್ರ ಬಜೆಟ್ ನೀಡಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಈ ಆಯವ್ಯಯವು ಭಾರತ ಜಗತ್ತಿನಲ್ಲೇ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಬೆಳೆಯಲು ಸಹಕಾರಿ’

-ಆರ್.ಅಶೋಕ್ ಪ್ರತಿಪಕ್ಷ ನಾಯಕ

ಯುವಕರ ಬಜೆಟ್:

‘ಕೇಂದ್ರದ ಬಜೆಟ್ ಭವಿಷ್ಯದ ಭಾರತದ ಯುವಕರ ಬಜೆಟ್ ಆಗಿದೆ. ಭಾರತ ಬೆಳೆಯುತ್ತಿರುವ ರಾಷ್ಟ್ರ ಎನ್ನುವುದನ್ನು ಈ ಬಜೆಟ್ ತೋರಿಸುತ್ತದೆ. ವಿದೇಶಿ ನೇರ ಬಂಡವಾಳ ಹೆಚ್ಚಿನ ಪ್ರಮಾಣದಲ್ಲಿ ಹರಿದು ಬರುವಂತೆ ಅನುಕೂಲ ಮಾಡಿದ್ದು, ಸರಕಾರದ ಸಾಲ ಕಡಿಮೆ ಮಾಡಿದ್ದು, ಮುಂದಿನ ದಿನಗಳಲ್ಲಿ ದೊಡ್ಡ ಬದಲಾವಣೆಗೆ ಕಾರಣವಾಗಲಿದೆ. ಇದು ಭವಿಷ್ಯದ ಭಾರತದ ಯುವಕರ ಬಜೆಟ್ ಆಗಿದೆ’

-ಬಸವರಾಜ ಬೊಮ್ಮಾಯಿ ಮಾಜಿ ಮುಖ್ಯಮಂತ್ರಿ

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News