ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ | ಪ್ರಕರಣ ಕೈಬಿಡುವಂತೆ ಕೋರಿ ಸಲ್ಲಿಸಿದ ಅರ್ಜಿ ವಜಾ

Update: 2025-04-22 22:30 IST
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ | ಪ್ರಕರಣ ಕೈಬಿಡುವಂತೆ ಕೋರಿ ಸಲ್ಲಿಸಿದ ಅರ್ಜಿ ವಜಾ
  • whatsapp icon

 ಬೆಂಗಳೂರು: ತನ್ನ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದಿಂದ ಕೈಬಿಡುವಂತೆ ಕೋರಿ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.

ಅತ್ಯಾಚಾರ ಪ್ರಕರಣದಲ್ಲಿ ತನ್ನ ಪಾತ್ರ ಇಲ್ಲ. ಆದ್ದರಿಂದ ಪ್ರಕರಣದಿಂದ ತನ್ನನ್ನು ಕೈಬಿಡುವಂತೆ ಪ್ರಜ್ವಲ್ ರೇವಣ್ಣ ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ.ಸಂತೋಷ್ ಗಜಾನನ ಭಟ್ ಅವರು, ಕ್ರೈಮ್ ನಂಬರ್ 20ರಲ್ಲಿ ಪ್ರಜ್ವಲ್ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ. ಇದರಿಂದ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣಗೆ ಹಿನ್ನಡೆಯಾಗಿದೆ.

ಆರೋಪಿ ಮೇಲಿರುವ ಆರೋಪಗಳನ್ನು ನ್ಯಾಯಾಧೀಶರು ಒತ್ತಿ ಹೇಳಿದ್ದು, ಈ ಸಂದರ್ಭದಲ್ಲಿ ನ್ಯಾಯಾಧೀಶರ ಮುಂದೆ ಕೈ ಮುಗಿದು ಪ್ರಜ್ವಲ್ ರೇವಣ್ಣ ಕಣ್ಣೀರು ಹಾಕಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News