ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ | ಎಸ್‍ಐಟಿ ಹೆಲ್ಪ್ ಲೈನ್‍ಗೆ ಬಂದ 30ಕ್ಕೂ ಹೆಚ್ಚು ಕರೆಗಳು : ವರದಿ

Update: 2024-05-25 15:47 GMT

ಪ್ರಜ್ವಲ್‌ ರೇವಣ್ಣ

ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯರು ದೂರು ನೀಡಲು ವಿಶೇಷ ತನಿಖಾ ತಂಡ ಆರಂಭಿಸಿದ್ದ ಸಹಾಯವಾಣಿಗೆ ಇದುವರೆಗೂ 30ಕ್ಕೂ ಹೆಚ್ಚು ಕರೆಗಳು ಬಂದಿರುವುದಾಗಿ ವರದಿಯಾಗಿದೆ.

ಅಶ್ಲೀಲ ವಿಡಿಯೋಗಳ ಪೆನ್‍ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೌರ್ಜನ್ಯಕ್ಕೆ ಒಳಗಾಗಿರುವ ಸಂತ್ರಸ್ತೆಯರು ಪೊಲೀಸ್ ಠಾಣೆಗೆ ತೆರಳಿ ದೂರು ನೀಡಲು ಹಿಂಜರಿಯುತ್ತಾರೆ ಎಂಬ ಉದ್ದೇಶದಿಂದ ಎಸ್‍ಐಟಿಗೆ ದೂರು ನೀಡಲು ಸಹಾಯವಾಣಿ ತೆರೆದಿದ್ದು, ಸಹಾಯವಾಣಿ ಸಂಖ್ಯೆ 6360938947ಗೆ ಇದೂವರೆಗೆ ಒಟ್ಟು 30ಕ್ಕೂ ಹೆಚ್ಚು ಕರೆಗಳು ಬಂದಿವೆ ಎಂದು ಎಸ್‍ಐಟಿ ಮೂಲಗಳು ತಿಳಿಸಿವೆ.

ಇದುವರೆಗೂ ದೂರು ನೀಡದೆ ಇರುವ ಸಂತ್ರಸ್ತ ಮಹಿಳೆಯರು ಹೆಲ್ಪ್‍ಲೈನ್‍ಗೆ ಕರೆ ಮಾಡಿ ದೂರು ನೀಡಿದರೆ, ಅವರು ಹೇಳಿದ ಸ್ಥಳಕ್ಕೆ ತೆರಳಿ, ಮಾಹಿತಿ ಸಂಗ್ರಹಿಸಲು ಎಸ್‍ಐಟಿ ಅಧಿಕಾರಿಗಳು ಸಿದ್ದರಿದ್ದಾರೆ. ಸಂತ್ರಸ್ತೆಯರ ಗುರುತು ಹಾಗೂ ಮಾಹಿತಿ ಗೌಪ್ಯತೆ ಕಾಪಾಡಲಾಗುತ್ತದೆ. ಇಲ್ಲವೇ ನೇರವಾಗಿ ಅಧಿಕಾರಿಗಳನ್ನೂ ಸಂಪರ್ಕಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News