ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ನಿಧನ

Update: 2024-09-19 11:38 GMT

ಬೆಂಗಳೂರು: ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ (84) ಅವರು ಗುರುವಾರ ನಿಧನರಾಗಿದ್ದಾರೆ.

ಬೆಂಗಳೂರಿನ ಜ್ಯೋತಿಪುರ ನಿವಾಸದಲ್ಲಿ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. 

ಈ ಹಿಂದೆ ಡಿ.ಕೆಂಪಣ್ಣ ಅವರು ಬಸರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರದ ವಿರುದ್ಧ ಶೇ.40 ಕಮಿಷನ್‌ ಆರೋಪ ಮಾಡಿ  ಸುದ್ದಿಯಾಗಿದ್ದರು. ಬಳಿಕ ರಾಜ್ಯಾದ್ಯಂತ ಈ ವಿಚಾರ ಭಾರೀ ರಾಜಕೀಯ ಚರ್ಚೆಗೆ ಕಾರಣವಾಗಿತ್ತು.

ಸಿಎಂ ಸಿದ್ದರಾಮಯ್ಯ ಸಂತಾಪ :

ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರ ನಿಧನವಾರ್ತೆ ನೋವುಂಟುಮಾಡಿದೆ. ಹಿಂದಿನ ಸರಕಾರದ ಅವಧಿಯಲ್ಲಿ ದೇಶಾದ್ಯಂತ ಸುದ್ದಿ ಮಾಡಿದ್ದ ಶೇ.40 ಕಮಿಷನ್ ಹಗರಣವನ್ನು ಹೊರತಂದು, ಗುತ್ತಿಗೆ ಕಾಮಗಾರಿಗಳಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರದ ವಿರುದ್ಧ ಅವರು ಸೆಟೆದು ನಿಂತಿದ್ದರು. ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗದ ನಿರ್ಭೀತ ಧ್ವನಿಯೊಂದನ್ನು ನಾಡು ಇಂದು ಕಳೆದುಕೊಂಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣ ಅವರ ನಿಧನದ ಸಂಗತಿ ತಿಳಿದು ಮನಸ್ಸಿಗೆ ಅಪಾರ ನೋವುಂಟಾಯಿತು. ಗುತ್ತಿಗೆ ಕಾಮಗಾರಿಗಳಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರವನ್ನು ಹೊರತಂದು ನಿರ್ಭೀತವಾಗಿ ಹೋರಾಡಿದ ಅವರ ನೇರ, ನಿಸ್ಪಕ್ಷಪಾತ ನಡೆ ಶ್ಲಾಘನೀಯ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬದವರಿಗೆ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸಂತಾಪ ಸೂಚಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News