ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯನವರ ರಾಜೀನಾಮೆ ಕೇಳುವುದು ರಾಜಕೀಯ ಪ್ರೇರಿತ : ಪ್ರಿಯಾಂಕ್ ಖರ್ಗೆ
Update: 2024-11-06 14:39 GMT
ಬೆಂಗಳೂರು : ‘ಮುಡಾ’ ಪ್ರಕರಣದʼ ವಿಚಾರಣೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗಿದ್ದಾರೆಂದ ಮಾತ್ರಕ್ಕೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಕೆ ರಾಜೀನಾಮೆ ನೀಡಬೇಕು. ಬಿಜೆಪಿ ಅಧ್ಯಕ್ಷರ ವಿರುದ್ಧ ಜಾರಿ ನಿರ್ದೇಶನಾಲಯ (ಈಡಿ)ದಲ್ಲಿ ಪ್ರಕರಣವಿದೆ. ಇಸಿಆರ್ ದಾಖಲಿಸಲಾಗಿದೆ, ಅವರು ರಾಜೀನಾಮೆ ನೀಡಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.
ಸಿಎಂ ರಾಜೀನಾಮೆ ಕೇಳುವುದು ರಾಜಕೀಯ ಪ್ರೇರಿತ ಎಂದು ಎಲ್ಲರಿಗೂ ತಿಳಿದಿದೆ. ಕಾನೂನು ಪಾಲಿಸುವುದು ಎಲ್ಲ ಪ್ರಜೆಗಳ ಕರ್ತವ್ಯ. ಅದನ್ನು ಮಾಡುತ್ತೇನೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟವಾಗಿ ಹೇಳಿದ್ದಾರೆ. ಆದರೆ, ವಿಪಕ್ಷಗಳು ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿವೆ ಎಂದು ಅವರು ದೂರಿದ್ದಾರೆ.